ಸೋಮವಾರಪೇಟೆ, ಆ. 29: ಭಾರೀ ಮಳೆಗೆ ತಡೆಗೋಡೆ ಕುಸಿತಗೊಂಡು ವಾಸದ ಮನೆಗೆ ಅಪಾಯ ತಂದೊಡ್ಡಿದೆ.

ಹಾನಗಲ್ಲು ಶೆಟ್ಟಳ್ಳಿ ಗ್ರಾಮ ನಿವಾಸಿ ಡಿ.ಎಂ. ಬಸವರಾಜು ಎಂಬವರ ವಾಸದ ಮನೆಯ ಮುಂಭಾಗ ಕಳೆದ 12 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ತಡೆಗೋಡೆ ಕುಸಿದಿದ್ದು, ಮನೆಗೆ ಅಪಾಯ ಎದುರಾಗಲಿದೆ. ಸ್ಥಳಕ್ಕೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರವೀಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.