ಮಡಿಕೇರಿ, ಆ. 29: ಪರಿಹಾರ ಕೇಂದ್ರಗಳಿಗೆ ನಗರ ಮಹಿಳಾ ಕಾಂಗ್ರೆಸ್ ಘಟಕ ಭೇಟಿ ನೀಡಿ ನೊಂದವರಿಗೆ ಸಾಂತ್ವನ ಹೇಳಿತು.
ಕಾಂಗ್ರೆಸ್ ನಗರಾಧ್ಯಕ್ಷೆ ಹೊಟ್ಟೆಯಂಡ ಪಾರ್ವತಿ (ಫ್ಯಾನ್ಸಿ) ಹಾಗೂ ಇತರ ಪದಾಧಿಕಾರಿಗಳು ನಗರದ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿ ನಿರಾಶ್ರಿತರೊಂದಿಗೆ ಮಹಿಳಾ ಕಾಂಗ್ರೆಸ್ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಭಯ ನೀಡಿದರು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿನ ಬಗ್ಗೆ ಹೆಚ್ಚು ಆಸಕ್ತಿ ವಹಿಸಿ ಮಹಿಳಾ ಕಾಂಗ್ರೆಸ್ ಕಾರ್ಯ ನಿರ್ವಹಿಸಲಿದೆ ಎಂದು ಪಾರ್ವತಿ ತಿಳಿಸಿದರು.