ಸೋಮವಾರಪೇಟೆ, ಆ. 30: ಇಲ್ಲಿಗೆ ಸಮೀಪದ ಕಿರಗಂದೂರು ಗ್ರಾಮದ ಶಿವಕುಮಾರ್ ಎಂಬವರ ಲೈನ್‍ಮನೆಯಲ್ಲಿ ವಾಸವಿದ್ದ ಅಸ್ಸಾಂ ಮೂಲದ ಅವಿವಾಹಿತ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಲೈನ್‍ಮನೆಯಲ್ಲಿ ವಾಸವಿದ್ದ ರುಖಿಯಾ ಬೇಗಂ (19) ಎಂಬಾಕೆ ಮನೆಯ ಚಾವಣಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಂತ್ಯ ಸಂಸ್ಕಾರವನ್ನು ಇಲ್ಲಿನ ಆಲೇಕಟ್ಟೆ ರಸ್ತೆಯಲ್ಲಿರುವ ಖಬರಸ್ಥಾನದಲ್ಲಿ ನೆರವೇರಿಸಲಾಯಿತು.