ಮಡಿಕೇರಿ, ಆ.31: ಆಹಾರ ಇಲಾಖೆಯ ನೂತನ ಉಪನಿರ್ದೇಶಕರಾಗಿ ಎಸ್.ಸದಾಶಿವಯ್ಯ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಎಸ್.ಸದಾಶಿವಯ್ಯ ಅವರು ಈ ಹಿಂದೆ ರಾಮನಗರ ಜಿಲ್ಲೆಯಲ್ಲಿ ಆಹಾರ ಇಲಾಖೆ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಒಂದೂವರೆ ವರ್ಷಗಳಿಂದ ಆಹಾರ ಇಲಾಖೆ ಉಪನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುಟ್ಟಸ್ವಾಮಿ ಅವರು ರಾಮನಗರ ಜಿಲ್ಲೆಗೆ ವರ್ಗಾವಣೆಗೊಂಡಿದ್ದಾರೆ.