ಮಡಿಕೇರಿ, ಆ. 31: ಪ್ರಕೃತಿ ವಿಕೋಪದಡಿ ಸಂತ್ರಸ್ತರಾದವರಿಗೆ ಸರಕಾರದ ವತಿಯಿಂದ ವಿಶೇಷ ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುವ ಆಹಾರ ಸಾಮಗ್ರಿಗಳ ಕಿಟ್ ಅನ್ನು ಮಕ್ಕಂದೂರು ಶಾಲೆಯಲ್ಲಿ ತೆರೆಯಲಾಗಿರುವ ಪರಿಹಾರ ಕೇಂದ್ರದಲ್ಲಿ ವಿಧಾನಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ವಿತರಣೆ ಮಾಡಿದರು. ಈ ಸಂದರ್ಭ ಗ್ರಾ.ಪಂ. ಅಧ್ಯಕ್ಷೆ ಲಕ್ಕಪ್ಪನ ಕಾವೇರಮ್ಮ ಇನ್ನಿತರರಿದ್ದರು.