ಮಡಿಕೇರಿ, ಆ. 31: ವಿ.ಬಾಡಗ ಗ್ರಾಮದ ಚಾಮುಂಡಿ ಕಲ್ಚರಲ್ ಕ್ಲಬ್ ಹಾಗೂ ಪೊವ್ವದಿ ಮಹಿಳಾ ಸಮಾಜದ ಸಹಭಾಗಿತ್ವದಲ್ಲಿ ಸೆಪ್ಟೆಂಬರ್ 3ರಂದು ಆಯೋಜಿಸಿಕೊಂಡು ಬರಲಾಗುತ್ತಿದ್ದ ಕೈಲು ಮುಹೂರ್ತ ಕ್ರೀಡಾಕೂಟ ಹಾಗೂ ಕಾರ್ಯಕ್ರಮವನ್ನು ಈ ಬಾರಿ ರದ್ದುಪಡಿಸಲಾಗಿದೆ. ಪ್ರಸಕ್ತ ವರ್ಷ ಸಂಭವಿಸಿದ ಪ್ರಾಕೃತಿಕ ದುರಂತದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದ್ದು, ಇದರ ವೆಚ್ಚವನ್ನು ಪರಿಹಾರ ನಿಧಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಪದಾಧಿಕಾರಿಗಳು ತಿಳಿಸಿದ್ದಾರೆ.