ಪೊನ್ನಂಪೇಟೆ, ಆ. 31: ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ವಕೀಲ ಮನೋಜ್ ಬೋಪಯ್ಯ ಅವರ ಮೇಲೆ ಪ್ರಕರಣ ದಾಖಲಿಸಿ ಠಾಣಾಧಿಕಾರಿಗಳು ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಪೊನ್ನಂಪೇಟೆ ವಕೀಲರ ಸಂಘದಿಂದ ಇಂದು ಬೆಳಿಗ್ಗೆ 11 ರಿಂದ 12 ಗಂಟೆವರೆಗೆ ಕಲಾಪ ಬಹಿಷ್ಕಾರ ನಡೆಯಿತು.

ವಕೀಲರ ಸಂಘದ ಅಧ್ಯಕ್ಷ ಎಸ್.ಡಿ. ಕಾವೇರಿಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ, ಪೊಲೀಸ್ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಲು ತೀರ್ಮಾನಿಸಲಾಯಿತು.