ಶನಿವಾರಸಂತೆ, ಸೆ. 2: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ದೊಡ್ಡಕೊಡ್ಲಿ ಗ್ರಾಮದ ಕಲ್ಲುಮಠದ ನಂಜುಂಡಸ್ವಾಮಿ ವಿದ್ಯಾಸಂಸ್ಥೆಯಲ್ಲಿ 2018-19ನೇ ಸಾಲಿನ ವಲಯ ಮಟ್ಟದ ಕ್ರೀಡಾಕೂಟ ತಾ. 3 ರಂದು (ಇಂದು) ನಡೆಯಲಿದೆ.
ಬೆಳಿಗ್ಗೆ 9.30ಕ್ಕೆ ಕಲ್ಲುಮಠದ ಮಹಾಂತಸ್ವಾಮೀಜಿ ಅವರ ಸಾನಿಧ್ಯದಲ್ಲಿ ಬೆಂಬಳೂರು ಗ್ರಾಮದ ಕಾಫಿ ಬೆಳೆಗಾರ ಬಿ.ಕೆ. ಚಿನ್ನಪ್ಪ ಕ್ರೀಡಾಕೂಟವನ್ನು ಉದ್ಘಾಟಿಸುತ್ತಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ಬಿ.ಕೆ. ಅಜಿತ್ ಕುಮಾರ್, ಕೆನರಾ ಬ್ಯಾಂಕ್ ವ್ಯವಸ್ಥಾಪಕ ಅರ್ಜುನ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್, ಕೊಡ್ಲಿಪೇಟೆ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಸುರೇಶ್, ಸೋಮವಾರಪೇಟೆ ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಟಿ. ವೆಂಕಟೇಶ್ ಪಾಲ್ಗೊಳ್ಳುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.