ಕುಶಾಲನಗರ, ಸೆ. 4: ರಸ್ತೆಯಲ್ಲಿ ತೆರಳುತ್ತಿದ್ದ ಪಾದಚಾರಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಕುಶಾಲನಗರ ಗಡಿಭಾಗದ ಕಾವೇರಿ ಸೇತುವೆಯಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲೂಕಿನ ಆಲನಹಳ್ಳಿ ಗ್ರಾಮದ ನಿವಾಸಿ ಜಯರಾಂ (65) ಎಂಬವರು ಕೂಡ್ಲೂರು ಗ್ರಾಮದಲ್ಲಿರುವ ತಮ್ಮ ಮಗಳ ಮನೆಗೆ ಬಂದು ಹಿಂತಿರುಗುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ.

ಮಾಹಿತಿ ತಿಳಿದ ಕುಶಾಲನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿ ಮುಂದಿನ ಕ್ರಮಕೈಗೊಂಡಿದ್ದಾರೆ. ಮೃತ ಜಯರಾಂ ಮೂವರು ಪುತ್ರಿಯರನ್ನು ಅಗಲಿದ್ದಾರೆ.