ಮಡಿಕೇರಿ, ಸೆ.4: ಅತಿವೃಷ್ಟಿಯಿಂದ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಶೀಘ್ರದಲ್ಲಿಯೇ ವೈಜ್ಞಾನಿಕ ಸಮೀಕ್ಷೆ ನಡೆಸಿ ಮನೆ ನಿರ್ಮಿಸಿಕೊಡಲಾಗುವದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವೆÀ ಡಾ.ಜಯಮಾಲ ಅವರು ಹೇಳಿದ್ದಾರೆ.ಪರಿಹಾರ ಕೇಂದ್ರಕ್ಕೆ ಡಾ. ಜಯಮಾಲ ಭೇಟಿ(ಮೊದಲ ಪುಟದಿಂದ) ನಗರದ ಮೈತ್ರಿ ಭವನದ ಪರಿಹಾರ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ನಿರಾಶ್ರಿತರೊಂದಿಗೆ ಸಮಾಲೋಚನೆ ನಡೆಸಿ ಮಕ್ಕಳ ಯೋಗ ಕ್ಷೇಮ ವಿಚಾರಿಸಿ ಬಳಿಕ ಮಾತನಾಡಿದ ಸಚಿವರು ಅತಿವೃಷ್ಟಿಯಿಂದ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಮನೆ ನಿರ್ಮಿಸಿಕೊಡಲು ಬಹಳಷ್ಟು ಜನ ದಾನಿಗಳು ಮುಂದೆ ಬಂದಿದ್ದು, ಸರ್ಕಾರ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು. ಪರಿಹಾರ ಕೇಂದ್ರದಲ್ಲಿರುವ ಮಕ್ಕಳಿಗೆ ಈಗಾಗಲೇ ಶಾಲೆಗಳನ್ನು ಆರಂಭಿಸಿದ್ದು, ಮಕ್ಕಳ ಶಿಕ್ಷಣಕ್ಕೆ ಯಾವದೇ ತೊಂದರೆಯಾಗದಂತೆ ಕ್ರಮಕೈಗೊಂಡಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಅಗತ್ಯ ನೆರವು ನೀಡಿರುವದಾಗಿ ತಿಳಿಸುತ್ತಾ ಪರಿಹಾರ ಕೇಂದ್ರದಲ್ಲಿರುವ ನಿರಾಶ್ರಿತರಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡಿರುವದಾಗಿ ಸಚಿವರು ನುಡಿದರು. ಅತಿವೃಷ್ಟಿಯಿಂದ ನಿರಾಶ್ರಿತರಾಗಿರುವವರ ನೆರವಿಗೆ ಸರ್ಕಾರವು ಎಲ್ಲಾ ರೀತಿಯ ನೆರವು ನೀಡಲಿದ್ದು, ಯಾರು ಕೂಡ ಚಿಂತಿಸುವ ಅಗತ್ಯವಿಲ್ಲ ಎಂದು ಸಚಿವರು ಧೈರ್ಯ ತುಂಬಿದರು. ಬಳಿಕ ಅಂಗನವಾಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ, ಇತರರು ಇದ್ದರು.