ಸುಂಟಿಕೊಪ್ಪ, ಸೆ. 4: ವಿವಿಧ ಪ್ರಕಾರಗಳ ನೃತ್ಯ ಚಿತ್ರ ಕಲೆಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿ ಎಳೆ ಪ್ರಾಯದಲ್ಲೇ ತಮ್ಮ ಅಂತರಾಳದಲ್ಲಿ ಅಡಗಿದ್ದ ಪ್ರತಿಭೆಗಳನ್ನು ಪ್ರದರ್ಶಿಸಿದರು.

ಸುಂಟಿಕೊಪ್ಪ ಸಂತ ಮೇರಿ ಶಾಲೆಯಲ್ಲಿ ಸುಂಟಿಕೊಪ್ಪ ಹೋಬಳಿ ಮಟ್ಟದ ಕ್ಲಸ್ಟರ್ ಕೇಂದ್ರದ 6 ಪ್ರೌಢಶಾಲೆಯ ವಿದ್ಯಾರ್ಥಿಗಳು ಕಲೋತ್ಸವದಲ್ಲಿ ಭಾಗವಹಿಸಿ ಪ್ರತಿಭೆಯನ್ನು ಪ್ರದರ್ಶಿಸಿದರೆ 16 ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ನೃತ್ಯ ಸಂಗೀತದೊಂದಿಗೆ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮವನ್ನು ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವ್ಯವಸ್ಥಾಪಕ ಫಾದರ್ ಎಡ್ವರ್ಡ್ ವಿಲಿಯಂ ಸಾಲ್ಡಾನಾ ಸಸಿಗೆ ನೀರು ಹಾಕುವ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಿದರು. 22 ಶಾಲೆಗಳಿಂದ ಬಂದ ವಿದ್ಯಾರ್ಥಿಗಳು ವಿವಿಧ ಕಲಾ ಪ್ರಕಾರಗಳಲ್ಲಿ ಭಾಗವಹಿಸಿದ್ದರು. ವಿಜೇತರಾದವರಿಗೆ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ.