ಸುಂಟಿಕೊಪ್ಪ,ಆ.4 : ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿ ಕಲ್ಯಾಣ ನಿಧಿ ವತಿಯಿಂದ ವಿಜ್ಞಾನ ವಿಷಯ ಬೋಧಿಸುವ ಶಿಕ್ಷಕರಿಗೆ ವೈಜ್ಞಾನಿಕ ಕ್ಷೇತ್ರದ ಸಾಧನೆಯನ್ನು ಪರಿಗಣಿಸಿ ನೀಡಲ್ಪಡುವ ಪ್ರಸಕ್ತ ಸಾಲಿನ ವಿಶೇಷ ಶಿಕ್ಷಕರ ಪ್ರಶಸ್ತಿಯು ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಟಿ.ಜಿ.ಪ್ರೇಮ್‍ಕುಮಾರ್ ಅವರಿಗೆ ಲಭಿಸಿದೆ.ತಾ.5 ರಂದು (ಇಂದು) ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆÉಟ್ ಹಾಲ್‍ನಲ್ಲಿ ಬೆಳಿಗ್ಗೆ 10 ಗಂಟೆಗೆ ಏರ್ಪಡಿಸಿರುವ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಶಿಕ್ಷಕ ಟಿ.ಜಿ.ಪ್ರೇಮ್‍ಕುಮಾರ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಮೂಲತಃ ತೊರೆನೂರು ಗ್ರಾಮದವರಾಗಿದ್ದು 1994 ರಲ್ಲಿ ತಮ್ಮ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕ ವೃತ್ತಿ ಆರಂಭಿಸಿದ ಶಿಕ್ಷಕ ಪ್ರೇಮ್‍ಕುಮಾರ್ 2003 ರಿಂದ ಸುಂಟಿಕೊಪ್ಪ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಶಾಲಾ ಚಟುವಟಿಕೆಗಳೊಂದಿಗೆ ಶಿಕ್ಷಣ ಇಲಾಖೆ ಹಾಗೂ
ವಿಶೇಷ ಶಿಕ್ಷಕ ಪ್ರಶಸ್ತಿ
(ಮೊದಲ ಪುಟದಿಂದ) ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ನಡೆಯುವ ವಿಜ್ಞಾನ, ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ ಕಾರ್ಯಕ್ರಮ, ಪರಿಸರ ಜಾಗೃತಿ ಆಂದೋಲನ ಹಾಗೂ ಮೌಢ್ಯ ನಿವಾರಣೆ ಕಾರ್ಯಕ್ರಮಗಳ ಸಂಘಟನೆ ಮೂಲಕ ಶೈಕ್ಷಣಿಕ ಮತ್ತು ವಿಜ್ಞಾನ ಕ್ಷೇತ್ರದ ಬೆಳವಣಿಗೆಯಲ್ಲಿ ಕಳೆದ 23 ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿರುವದನ್ನು ಗುರುತಿಸಿ ಸದರಿ ಶಿಕ್ಷಕರಿಗೆ ವಿಜ್ಞಾನ ಕ್ಷೇತ್ರದ ವಿಶೇಷ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಶಿಕ್ಷಕ ಪ್ರೇಮ್‍ಕುಮಾರ್ ರಾಜ್ಯ ವಿಜ್ಞಾನ ಪರಿಷತ್ತಿನ ಸಕ್ರಿಯ ಕಾರ್ಯಕರ್ತರಾಗಿದ್ದು ಪ್ರಸ್ತುತ ಜಿಲ್ಲಾ ಸಮಿತಿಯ ಸಂಯೋಜಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜಿಲ್ಲೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಶಾಲಾ ಕಾರ್ಯಕ್ರಮದ ಜಿಲ್ಲಾ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.