ಮಡಿಕೇರಿ, ಸೆ. 4: ಅತಿವೃಷ್ಟಿಯಿಂದಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ ಪ್ರಥಮ ಆದ್ಯತೆಯಲ್ಲಿ ಪುನರ್ವಸತಿ ಕಲ್ಪಿಸಲಾ ಗುವದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಡಾ. ಜಯಮಾಲ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವರು, ಅತಿವೃಷ್ಟಿ ಯಿಂದಾಗಿ ಮಹಿಳೆಯರು, ಮಕ್ಕಳು, ಮನೆ-ಮಠ ಕಳೆದುಕೊಂಡಿದ್ದು, ಇಂತಹ ಕುಟುಂಬಗಳಿಗೆ ಆಶ್ರಯ ಕಲ್ಪಿಸುವ ನಿಟ್ಟಿನಲ್ಲಿ ಆದ್ಯತೆ ಮೇಲೆ ಕ್ರಮವಹಿಸಲಾಗುವದು ಎಂದು ಹೇಳಿದರು. ಅತಿವೃಷ್ಟಿಯಿಂದಾಗಿ ನಿರಾಶ್ರಿತರಾಗಿರುವ ಕುಟುಂಬಗಳಿಗೆ

ಮಡಿಕೇರಿ, ಸೆ. 4: ಅತಿವೃಷ್ಟಿಯಿಂದಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ ಪ್ರಥಮ ಆದ್ಯತೆಯಲ್ಲಿ ಪುನರ್ವಸತಿ ಕಲ್ಪಿಸಲಾ ಗುವದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಡಾ. ಜಯಮಾಲ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವರು, ಅತಿವೃಷ್ಟಿ ಯಿಂದಾಗಿ ಮಹಿಳೆಯರು, ಮಕ್ಕಳು, ಮನೆ-ಮಠ ಕಳೆದುಕೊಂಡಿದ್ದು, ಇಂತಹ ಕುಟುಂಬಗಳಿಗೆ ಆಶ್ರಯ ಕಲ್ಪಿಸುವ ನಿಟ್ಟಿನಲ್ಲಿ ಆದ್ಯತೆ ಮೇಲೆ ಕ್ರಮವಹಿಸಲಾಗುವದು ಎಂದು ಹೇಳಿದರು. ಅತಿವೃಷ್ಟಿಯಿಂದಾಗಿ ನಿರಾಶ್ರಿತರಾಗಿರುವ ಕುಟುಂಬಗಳಿಗೆ ಸಮರ್ಪಕವಾಗಿ ತಲಪಿಸಬೇಕಿದೆ. ಅಂಗನವಾಡಿಗಳಿಗೆ ಅಡುಗೆ ಅನಿಲ ವ್ಯವಸ್ಥೆ, ಕಡ್ಡಾಯವಾಗಿ ಶೌಚಾಲಯ ಇರಬೇಕು ಎಂದು ಅವರು ಹೇಳಿದರು.

ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ 69 ವಿಕಲಚೇತನರು, 188 ಹಿರಿಯ ನಾಗರಿಕರು ಮನೆ ಕಳೆದುಕೊಂಡಿದ್ದಾರೆ. 19 ಜನರ ಬದುಕು ಅತಂತ್ರವಾಗಿದೆ. ಹೆಣ್ಣು ಮಕ್ಕಳಿಗೆ ಉದ್ಯೋಗ ಕಲ್ಪಿಸಿ ಆರ್ಥಿಕ ಸಬಲೀಕರಣಕ್ಕೆ ಅವಕಾಶ ಮಾಡಬೇಕಿದೆ. ಈ ಸಂಬಂಧ ಇಲಾಖೆಯಿಂದ ಅನುದಾನ ಒದಗಿಸಲಾಗುವದು. ಗರ್ಭಿಣಿಯರು, ಬಾಣಂತಿಯರು, ಮಕ್ಕಳಿಗೆ ಅಪೌಷ್ಟಿಕತೆ ಉಂಟಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಸಚಿವರು ಮಾಹಿತಿ ನೀಡಿದರು. ಮಡಿಕೇರಿ ದಸರಾ ಸಂಬಂಧಿಸಿದಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸದ ಅವರು, ಮಡಿಕೇರಿ ದಸರಾಗೆ ಹಿಂದಿನಂತೆ ಅನುದಾನ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಗೂ ಮೊದಲು ಅಧಿಕಾರಿಗಳಿಂದ ಮಾಹಿತಿ ಪಡೆದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ, ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ, ಜಿ.ಪಂ. ಸಿಇಓ ಪ್ರಶಾಂತ್ ಕುಮಾರ್ ಮಿಶ್ರ ಇತರರು ಇದ್ದರು.

.