ಮಡಿಕೇರಿ, ಸೆ. 4: ಕೊಡಗು ಜಿಲ್ಲೆಗೆ ಇಂದು ಭೇಟಿ ನೀಡಿದ್ದ ವಿಧಾನ ಪರಿಷತ್ ಸದಸ್ಯ ಶರವಣ ಅವರು ಅಯ್ಯಂಗೇರಿ ಶಾಲೆಯನ್ನು ದತ್ತು ಪಡೆದಿದ್ದಾರೆ. ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿದ ಅವರು, ಕೊಡಗಿನ ಮಳೆಯಿಂದ ಉಂಟಾಗಿರುವ ಸಮಸ್ಯೆಗೆ ಸಂಬಂಧಿಸಿದಂತೆ ಅಗತ್ಯ ವಸ್ತುಗಳ ಪೂರೈಕೆಗೆ ತಾನು ಸಿದ್ಧನಿದ್ದೇನೆ ಎಂದು ಹೇಳಿದರಲ್ಲದೆ, ಬಳಿಕ ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಅಲ್ಲದೇ ಸಂತ್ರಸ್ತರಿಗೆ ನೀಡಲು ಒಂದು ಲಾರಿಯಷ್ಟು ಅಗತ್ಯ ಸಾಮಗ್ರಿಗಳನ್ನು ಶರವಣ ಜಿಲ್ಲಾಡಳಿತಕ್ಕೆ ನೀಡಿದ್ದಾರೆ.