ಮಡಿಕೇರಿ, ಸೆ. 4: ಸರ್ಕಾರ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ ರೂ. 25 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ. 1 ಲಕ್ಷಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರಧಾನ ಮಾಡಿ ಗೌರವಿಸುತ್ತದೆ.
2018ನೆ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಉಪ ನಿದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಉಪ ನಿರ್ದೇಶಕರು, ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಹತ್ತಿರ ಮೈಸೂರು ರಸ್ತೆ ಮಡಿಕೇರಿ. ದೂರವಾಣಿ ಸಂಖ್ಯೆ 08272-298379 ಈ ವಿಳಾಸಕ್ಕೆ ಸೆಪ್ಟೆಂಬರ್ 10 ರೊಳಗೆ ಸಲ್ಲಿಸಬೇಕು. ನಿಗಧಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವದೇ ಕಾರಣಕ್ಕೂ ಪರಿಗಣಿಸಲಾಗುವದಿಲ್ಲ. ಅರ್ಜಿಗಳು ಕನ್ನಡ ಭಾಷೆಯಲ್ಲಿಯೇ ಸಲ್ಲಿಸಬೇಕು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮಲ್ಲೇಸ್ವಾಮಿ ಅವರು ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನಕ್ಕೆ
ಹಿಂದುಳಿದ ವರ್ಗಗಳ ಪ್ರವರ್ಗ-1 ರ ವಿದ್ಯಾರ್ಥಿಗಳಿಗೆ ರೂ. 1 ಲಕ್ಷ ಹಾಗೂ ಪ್ರವರ್ಗ 2ಎ, 3ಎ, 3ಬಿ ಮತ್ತು ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ರೂ.44,500 ಕ್ಕಿಂತ ಕಡಿಮೆ ಆದಾಯ ಹೊಂದಿರುವ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನವನ್ನು 2018-19ನೇ ಸಾಲಿನಲ್ಲಿ ಆನ್‍ಲೈನ್ ಮೂಲಕ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅಗತ್ಯವಿರುವ ಮಾಹಿತಿ/ ದಾಖಲೆ: ಶಾಲೆಯಲ್ಲಿ ಪ್ರವೇಶ ಪಡೆದಿರುವ ಬಗ್ಗೆ ಸ್ಯಾಟ್ಸ್-ಐಡಿ, ವಿದ್ಯಾರ್ಥಿಯ ಆಧಾರ ಸಂಖ್ಯೆ, (ಆಧಾರ್ ಸಂಖ್ಯೆ ಇಲ್ಲದಿದ್ದಲ್ಲಿ ಆಧಾರ್ ನೋಂದಣಿ ಮಾಡಿಸಿದ ಇ.ಐ.ಡಿ. ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ. ಐ.ಎಫ್.ಸಿ. ಸಂಖ್ಯೆ, ಬ್ಯಾಂಕಿನ ವಿಳಾಸ, ಪೋಷಕರ ಆಧಾರ್ ಸಂಖ್ಯೆ, ಜಾತಿ, ಆದಾಯ ಪ್ರಮಾಣ ಪತ್ರದ ಆರ್.ಡಿ. ಸಂಖ್ಯೆ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಪ್ರವೇಶ ಪಡೆದಿದ್ದಲ್ಲಿ ವಿದ್ಯಾರ್ಥಿ ನಿಲಯ ಪ್ರವೇಶ ಸಂಖ್ಯೆ (ಸಂಬಂಧಿಸಿದ ಇಲಾಖೆಯಿಂದ ಪಡೆದಿದ್ದು) ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿ ವೇತನ ಪಡೆದಿದ್ದಲ್ಲಿ ಹಿಂದಿನ ಸಾಲಿನ ಅರ್ಜಿ ಸಂಖ್ಯೆಯೊಂದಿಗೆ ಅರ್ಜಿ ಸಲ್ಲಿಸಬೇಕಾದ ಇಲಾಖಾ ವೆಬ್‍ಸೈಟ್ ssಠಿ.ಞಚಿಡಿಟಿಚಿಣಚಿಞಚಿ.gov.iಟಿ ನೋಡುವದು. ಆನ್‍ಲೈನ್ ಅರ್ಜಿ ಪ್ರತಿಯನ್ನು ಮುಖ್ಯೋಪಾಧ್ಯಾಯರಿಂದ ದೃಢೀಕರಿಸಿ ಎಲ್ಲಾ ದಾಖಲಾತಿಗಳೊಂದಿಗೆ ಆಯಾಯ ತಾಲ್ಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳಿಗೆ ಸಲ್ಲಿಸುವದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 30 ಕೊನೆ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಸೋಮವಾರಪೇಟೆ ತಾಲೂಕು-08276-282048, ಮಡಿಕೇರಿ ತಾಲೂಕು 08272-298034 ಹಾಗೂ ವೀರಾಜಪೇಟೆ ತಾ.ದೂ.ಸಂ : 08274-249211 ನ್ನು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಮಡಿಕೇರಿ ಕಚೇರಿ ದೂ.ಸಂ: 08272-225628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.
‘ಹೊಯ್ಸಳ’-‘ಕೆಳದಿ ಚೆನ್ನಮ್ಮ’ ಪ್ರಶಸ್ತಿಗೆ
2018-19ನೇ ಸಾಲಿನಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯಪ್ರಜ್ಞೆ ಯಿಂದ ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಪ್ರಶಸ್ತಿಯನ್ನು ಮುಂಬರುವ ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತಿದ್ದು, ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಶೌರ್ಯ ಪ್ರಶಸ್ತಿಗೆ ಆಗಸ್ಟ್ 2017 ರಿಂದ ಜುಲೈ 2018ರ ಒಳಗೆ ನಡೆದಿರಬೇಕು. ದಿನಾಂಕ 01-08-2000 ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10 ಸಾವಿರ ರೂ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಅರ್ಜಿಯನ್ನು ಸೆಪ್ಟೆಂಬರ್ 15 ರೊಳಗೆ ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸಬೇಕು.
2018ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ. ಮಡಿಕೇರಿ ದೂರವಾಣಿ ಸಂಖ್ಯೆ 08272-298379 ಸಂಪರ್ಕಿಸಬಹುದಾಗಿದೆ.