ನಾವೀನ್ಯತೆ, ತಾರ್ಕಿಕ, ಕಲೆ, ಕ್ರೀಡೆ, ಸಾಂಸ್ಕøತಿಕ ಸಮಾಜ ಸೇವೆ ಹಾಗೂ ಸಂಗೀತ ಈ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 5 ರಿಂದ 18 ವರ್ಷದೊಳಗಿನ ಮಕ್ಕಳಿಂದ 2018-19ನೇ ಸಾಲಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿಗಳನ್ನು ಕರೆಯಲಾಗಿದೆ. ಜಿಲ್ಲಾ ಮಟ್ಟದ ಪ್ರಶಸ್ತಿಯೂ ರೂ. ಹತ್ತು ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, ಮೇಲಿನ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಯನ್ನು ಅಸಾಧಾರಣವೆಂದು ಗುರುತಿಸಲು ಅವರ ಸಾಧನೆಯ ಬಗ್ಗೆ ದಿನಪತ್ರಿಕೆಗಳಲ್ಲಿ ವರದಿಯಾಗಿರಬೇಕು ಅಥವಾ ಸಂಬಂಧಪಟ್ಟ ಕ್ಷೇತ್ರದ ತಜ್ಞರಿಂದ ಪರೀಕ್ಷಿಸಿರಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಈ ಹಿಂದೆ ಯಾವುದಾದರೂ ವರ್ಷದಲ್ಲಿ ಪ್ರಶಸ್ತಿಗೆ ಅರ್ಜಿ ಪರಿಗಣಿಸಲ್ಪಟ್ಟಿದ್ದಲ್ಲಿ, ಪುನಃ ಅದನ್ನು ಪರಿಗಣಿಸಲಾಗುವುದಿಲ್ಲ.
2018-19ನೇ ಸಾಲಿನ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ ಇಲ್ಲಿಂದ ಪಡೆದು ದ್ವಿಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿಗಳೊಂದಿಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಪ್ರಸ್ತಾವನೆಯನ್ನು ದಿನಾಂಕ 30-09-2018ರ ಒಳಗೆ ಉಪನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ಗೇಟ್, ಮೈಸೂರು ರಸ್ತೆ, ಮಡಿಕೇರಿ, ಈ ಕಚೇರಿಗೆ ಸಲ್ಲಿಸತಕ್ಕದ್ದು. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. (ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ : 08272-298379)
ಕೆಳದಿ ಚೆನ್ನಮ್ಮ ಪ್ರಶಸ್ತಿ : 2018-19ನೇ ಸಾಲಿನಲ್ಲಿ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ - ಸಾಹಸ ಪ್ರದರ್ಶಿಸಿದ ಬಾಲಕರಿಗೆ “ಹೊಯ್ಸಳ” ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ” ಪ್ರಶಸ್ತಿಯನ್ನು ಮುಂಬರುವ ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ. ಪ್ರಕರಣವು ಆಗಸ್ಟ್ 2017 ರಿಂದ ಜುಲೈ 2018ರ ಒಳಗೆ ನಡೆದಿರಬೇಕು. ದಿನಾಂಕ 01-08-2000 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ. 10,000/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. 2018ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ (ದೂರವಾಣಿ : 08272 - 298379) ಇವರ ಕಚೇರಿಯಿಂದ ಪಡೆದು ಭರ್ತಿ ಮಾಡಿ ತಾ. 31ರೊಳಗೆ ಸಲ್ಲಿಸತಕ್ಕದ್ದು. ಅರ್ಜಿಗಳನ್ನು ಕನ್ನಡ ಬಾಷೆಯಲ್ಲಿಯೇ ಸಲ್ಲಿಸತಕ್ಕದ್ದು.