ಮಡಿಕೇರಿ, ಸೆ. 6: ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವ ಜನರು” ಕುರಿತ ಭಾಷಣ ಸ್ಪರ್ಧೆಯನ್ನು ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಆಯೋಜಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಭಾಷಣ ಸ್ಪರ್ಧೆಯು ಹಿಂದಿ ಅಥವಾ ಇಂಗ್ಲೀಷ್ ಭಾಷೆಗಳಲ್ಲಿ ಇರಲಿದೆ.

ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ 5 ಸಾವಿರ, ದ್ವಿತೀಯ ಬಹುಮಾನ 2 ಸಾವಿರ, ತೃತೀಯ ಬಹುಮಾನ 1 ಸಾವಿರ. ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ 25 ಸಾವಿರ, ದ್ವಿತೀಯ ಬಹುಮಾನ 10 ಸಾವಿರ, ತೃತೀಯ ಬಹುಮಾನ 5 ಸಾವಿರ ಹಾಗೂ ರಾಷ್ಟ್ರ ಮಟ್ಟದಲ್ಲಿ ಆಯ್ಕೆಯಾದವರಿಗೆ ಪ್ರಥಮ ಬಹುಮಾನ 2 ಲಕ್ಷ, ದ್ವಿತೀಯ ಬಹುಮಾನ 1 ಲಕ್ಷ, ತೃತೀಯ ಬಹುಮಾನ 50 ಸಾವಿರ.

ತಾಲೂಕು ಮಟ್ಟದ ಆಯ್ಕೆ ಪ್ರಕ್ರಿಯೆಯನ್ನು ತಾ. 8 ರಂದು ವೀರಾಜಪೇಟೆ ಕಾವೇರಿ ಪದವಿ ಕಾಲೇಜಿನಲ್ಲಿ ಬೆಳಿಗ್ಗೆ 10 ಗಂಟೆಗೆ, ನಗರದ ಎಪ್.ಎಂ.ಕೆ.ಎಂ.ಸಿ ಕಾಲೇಜಿನಲ್ಲಿ ತಾ. 10 ರಂದು ಬೆಳಿಗ್ಗೆ 10.30 ಗಂಟೆಗೆ ಮತ್ತು ಶನಿವಾರಸಂತೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಆಯ್ಕೆಗೊಂಡ ಮೂರು ಯುವ ಜನರು ಜಿಲ್ಲಾ ಮಟ್ಟದಲ್ಲಿ ಜರುಗುವ ಸ್ಪರ್ಧೆಯಲ್ಲಿ ಭಾಗವಹಿಸಬೇಕಿದೆ. ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಆಯ್ಕೆಯಾದವರು ರಾಜ್ಯ ಮಟ್ಟದ ಸ್ಪರ್ಧೆಗೆ ಭಾಗವಹಿಸಬೇಕು. ರಾಜ್ಯ ಮಟ್ಟದಲ್ಲಿ ಭಾಗವಹಿಸಿ ಆಯ್ಕೆಯಾದವರು ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಬೇಕಿದೆ.

ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಚಿಸುವ ಆಯಾಯ ತಾಲೂಕಿನ ಆಸಕ್ತ 18-29 ವಯೋಮಿತಿಯ ಯುವಜನರು ಹೆಚ್ಚಿನ ಮಾಹಿತಿಗಾಗಿ ಮಹೇಶ್ ಬಿ.ಬಿ. (7019095427), ಮಂಜುನಾಥ್ (8660349934), ವಿವೇಕ್ (9844182405), ಅಂಬಿಕಾ (7022380419) ಅಥವಾ 08272-225470 ಸಂಪರ್ಕಿಸಬಹುದಾಗಿದೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯ ಅಧಿಕಾರಿ ಜಸಿಂತ ಡಿಸೋಜ ತಿಳಿಸಿದ್ದಾರೆ.