ಮಡಿಕೇರಿ, ಸೆ. 6: ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಶಾಶ್ವತ ನೆಲೆ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಗುರ್ತಿಸಲಾಗಿರುವ ಸರ್ಕಾರಿ ಭೂಮಿಯಲ್ಲಿ ನಿವೇಶನ ನೀಡಲು ತ್ವರಿತ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನ್ಬುಕುಮಾರ್ ನಿರ್ದೇಶನ ನೀಡಿದ್ದಾರೆ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅತಿವೃಷ್ಟಿಯಿಂದ ಭೂಕುಸಿತ ಹಾಗೂ ಪ್ರವಾಹದಿಂದ ಉಂಟಾದ ಹಾನಿ ಸಂಬಂಧ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಸಂತ್ರಸ್ತ ಕುಟುಂಬದವರಿಗೆ ಆರೋಗ್ಯ, ವಸತಿ, ರಸ್ತೆ, ವಿದ್ಯುತ್ ಸಂಪರ್ಕ, ಕುಡಿಯುವ ನೀರು, ಉದ್ಯೋಗ ಮತ್ತು ಮಕ್ಕಳಿಗೆ ಶಿಕ್ಷಣ ಹೀಗೆ ನಾನಾ ಸೌಲಭ್ಯಗಳನ್ನು ಕಲ್ಪಿಸಬೇಕಿದೆ. ರಾಜೀವ್ ಗಾಂಧಿ ಕಾರ್ಪೋರೇಷನ್ ವತಿಯಿಂದ ಜನರ ನಿರೀಕ್ಷೆಗೆ ತಕ್ಕಂತೆ ಮಾದರಿ ಮನೆ ನಿರ್ಮಿಸಲಾಗುವದು. ಈಗಾಗಲೇ ಗುರುತಿಸಲಾಗಿರುವ ಜಾಗದಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಅಭಿಪ್ರಾಯದಂತೆ ನಿವೇಶನ ಗುರುತು ಮಾಡಿ ರಸ್ತೆ, ಚರಂಡಿ, ಕಲ್ಲು ನೆಡುವ ಕೆಲಸವನ್ನು ಎರಡು-ಮೂರು ದಿನದಲ್ಲಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ವಿಶೇಷ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಮಾಹಿತಿ ನೀಡಿ, ಪುನರ್ ವಸತಿ ಸಂಬಂಧ ಒಟ್ಟು 850 ಕ್ಕೂ ಹೆಚ್ಚು ಕುಟುಂಬಗಳಿಗೆ ಮನೆ ನಿರ್ಮಿಸಬೇಕಿದೆ. ಸದ್ಯ 23 ಎಕರೆ ಪಕ್ಕ ಸರ್ಕಾರಿ ಭೂಮಿ ಇದ್ದು, 30x40 ಅಡಿ ಅಳತೆಯಲ್ಲಿ 600 ನಿವೇಶನ ಗುರುತು ಮಾಡಬಹುದು ಎಂದು ಮಾಹಿತಿ ನೀಡಿದರು.

ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ ಮನೆ ಹಾನಿ ಸಂಬಂಧ 2,474 ಕುಟುಂಬಗಳಿಗೆ 3800 ರೂ. ಪರಿಹಾರ ಚೆಕ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದಾಗಿ ಭತ್ತ, ತೋಟಗಾರಿಕೆ ಬೆಳೆಗಳು, ಕಾಫಿ, ಸಾಂಬಾರ ಬೆಳೆಗಳು ಸೇರಿದಂತೆ ಬೆಳೆ ಹಾನಿಯಾಗಿದೆ. ಭತ್ತ ಬೆಳೆಗೆ ಕೆಲವು ಕಡೆ ಮಣ್ಣು ಮುಚ್ಚಿಕೊಂಡಿದೆ. ಕೆಲವು ಕಡೆ ಮರ ಗಿಡಗಳು ಕೊಚ್ಚಿಕೊಂಡು ಹೋಗಿದೆ. ಆದ್ದರಿಂದ ಎಲ್ಲವನ್ನು ಪರಿಗಣಿಸಿ ಪರಿಹಾರ ವಿತರಿಸಬೇಕು ಎಂದು ಅನ್ಬುಕುಮಾರ್ ಸಲಹೆ ನೀಡಿದರು.

ಈ ಸಂಬಂಧ ಮಾಹಿತಿ ನೀಡಿದ ಕೃಷಿ ಇಲಾಖೆ ಉಪ ನಿರ್ದೇಶಕ ರಾಜು 9 ಸಾವಿರಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಆ್ಯಪ್ ಮೂಲಕ ಸರ್ವೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್ ಮತ್ತು ಕಾಫಿ ಮಂಡಳಿ ಉಪ ನಿರ್ದೇಶಕರು ಬೆಳೆ ಹಾನಿ ಸಂಬಂಧ ಮ್ಯಾನುವೆಲ್ ಮೂಲಕ ಸರ್ವೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈಗಾಗಲೇ ಬೆಳೆ ಹಾನಿ ಸಂಬಂಧ ಸರ್ವೆ ಮಾಡಿರುವದಕ್ಕೆ ಕೂಡಲೇ ಪರಿಹಾರ ವಿತರಣೆ ಮಾಡಬೇಕು. (ಮೊದಲ ಪುಟದಿಂದ) ಪರಿಹಾರ ವಿತರಣೆಯಲ್ಲಿ ವಿಳಂಭ ಮಾಡಿ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಡಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಚ್ಚರಿಕೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಗ್ರಾಮೀಣಾಭಿವೃದ್ಧಿ ರಸ್ತೆಗಳ ಕಾಮಗಾರಿ ಸಂಬಂಧ ಮಾಹಿತಿ ಪಡೆದ ಅವರು ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಮತ್ತು ವೈಜ್ಞಾನಿಕವಾಗಿ ನಿರ್ವಹಿಸುವಂತೆ ಎಂಜಿನಿಯರ್‍ಗಳಿಗೆ ಸೂಚನೆ ನೀಡಿದರು.

ಸದ್ಯದಲ್ಲೇ ಕೇಂದ್ರ ತಂಡ ಭೇಟಿ: ಅತಿವೃಷ್ಟಿಯಿಂದ ಉಂಟಾದ ಹಾನಿ ಬಗ್ಗೆ ಅಧ್ಯಯನ ಮಾಡಲು ಸದ್ಯದಲ್ಲಿಯೇ ಕೇಂದ್ರ ತಂಡವು ಕೊಡಗು ಜಿಲ್ಲೆಗೆ ಆಗಮಿಸಲಿದ್ದು, ಅಗತ್ಯ ದಾಖಲೆಗಳ ನಿಖರ ಮಾಹಿತಿ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಸೂಚನೆ ನೀಡಿದರು.

ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಕುಡಿಯುವ ನೀರು ಶುದ್ಧವಾಗಿದೆಯೇ ಎಂಬದನ್ನು ಪರೀಕ್ಷೆ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಲಹೆ ಮಾಡಿದರು.

ಮುಕ್ಕೋಡ್ಲು, ಮುಟ್ಲು, ಕಾಲೂರು, ದೇವಸ್ತೂರು, ಆವಂಡಿ ಮತ್ತಿತರ ಗ್ರಾಮಗಳಿಗೆ 5-6 ದಿನದಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವದು ಎಂದು ಚೆಸ್ಕ್ ಇಇ ಸೋಮಶೇಖರ ಮಾಹಿತಿ ನೀಡಿದರು.

ವಿಶೇಷ ಅನ್ನಭಾಗ್ಯ (ಮೊದಲ ಪುಟದಿಂದ) ಪರಿಹಾರ ವಿತರಣೆಯಲ್ಲಿ ವಿಳಂಭ ಮಾಡಿ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಡಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಚ್ಚರಿಕೆ ನೀಡಿದರು.

ವಿಶೇಷ ಅನ್ನಭಾಗ್ಯ ಕೆಎಸ್‍ಆರ್‍ಟಿಸಿ ಘಟಕ ವ್ಯವಸ್ಥಾಪಕಿ ಗೀತಾ ಮಾಹಿತಿ ನೀಡಿದರು. ಅತಿವೃಷ್ಟಿಗೆ ತುತ್ತಾದ ಪ್ರದೇಶದ ಜನರಿಗೆ ಬಸ್ ಪಾಸ್ ಕಲ್ಪಿಸಲು ಬೇಡಿಕೆ ಬರುತ್ತಿದ್ದು, ಈ ಸಂಬಂಧ ಅಗತ್ಯ ಕ್ರಮಕೈಗೊಳ್ಳುವಂತೆ ಕೆಎಸ್‍ಆರ್‍ಟಿಸಿ ಡಿಪೋ ಮ್ಯಾನೇಜರ್‍ಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಜಿ.ಪಂ.ಸಿಇಓ ಪ್ರಶಾಂತ್ ಕುಮಾರ್ ಮಿಶ್ರ ಬಾಪೂಜಿ ಸೇವಾ ಕೇಂದ್ರದ ಮೂಲಕ ಸಂತ್ರಸ್ತ ಕುಟುಂಬಗಳಿಗೆ ಗುರುತಿನ ಚೀಟಿ ವಿತರಿಸುವಂತೆ ತಾ.ಪಂ.ಇಒಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಜಾಬ್ ಕಾರ್ಡ್ ನೀಡಿ ಉದ್ಯೋಗ ಕಲ್ಪಿಸುವಂತಾಗಬೇಕು ಎಂದು ಹೇಳಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪೆಣ್ಣೇಕರ್, ಚಾರುಲತಾ ಸೋಮಲ್ ನಾನಾ ಇಲಾಖೆ ಅಧಿಕಾರಿಗಳು ಇದ್ದರು.

ಆಹಾರ ಕಿಟ್ ವಿತರಣೆ

ವಿಶೇಷ ಅನ್ನಭಾಗ್ಯ ಯೋಜನೆಯಡಿ ಇದುವರೆಗೆ 39,137 ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ ಮಾಡಲಾಗಿದೆ ಎಂದು ಆಹಾರ ಇಲಾಕೆಯ ಉಪ ನಿರ್ದೇಶಕ ಸದಾಶಿವಯ್ಯ ಮಾಹಿತಿ ನೀಡಿದ್ದಾರೆ.

ಇದುವರೆಗೆ ಜಿಲ್ಲೆಗೆ 42,800 ಆಹಾರ ಕಿಟ್‍ಗಳು ಬಂದಿದ್ದು, ಬಂದಿರುವ ಆಹಾರ್ ಕಿಟ್‍ಗಳಲ್ಲಿ 3,663 ವಿತರಣೆಗೆ ಬಾಕಿ ಇದ್ದು, ಗರ್ವಾಲೆ ಸೇರಿದಂತೆ ಪ್ರಕೃತಿ

ಕೆಎಸ್‍ಆರ್‍ಟಿಸಿ ಘಟಕ ವ್ಯವಸ್ಥಾಪಕಿ ಗೀತಾ ಮಾಹಿತಿ ನೀಡಿದರು. ಅತಿವೃಷ್ಟಿಗೆ ತುತ್ತಾದ ಪ್ರದೇಶದ ಜನರಿಗೆ ಬಸ್ ಪಾಸ್ ಕಲ್ಪಿಸಲು ಬೇಡಿಕೆ ಬರುತ್ತಿದ್ದು, ಈ ಸಂಬಂಧ ಅಗತ್ಯ ಕ್ರಮಕೈಗೊಳ್ಳುವಂತೆ ಕೆಎಸ್‍ಆರ್‍ಟಿಸಿ ಡಿಪೋ ಮ್ಯಾನೇಜರ್‍ಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.