ಮಡಿಕೇರಿ, ಸೆ. 6 : ರಾಷ್ಟ್ರೀಕೃತ ಬ್ಯಾಂಕ್, ಸಹಕಾರ ಸಂಸ್ಥೆಗಳು ಹಾಗೂ ಖಾಸಗಿ ಬ್ಯಾಂಕ್‍ಗಳಿಂದ ಸಾಲ ಪಡೆದ ಸಂತ್ರಸ್ತ ಕುಟುಂಬದವರಿಗೆ ಸಾಲ ಮರುಪಾವತಿ ಮಾಡುವಂತೆ ಯಾವದೇ ರೀತಿಯ ಒತ್ತಡ ತರಬಾರದು ಎಂದು ಸಂಬಂಧಪಟ್ಟ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ಮಡಿಕೇರಿ, ಸೆ. 6 : ರಾಷ್ಟ್ರೀಕೃತ ಬ್ಯಾಂಕ್, ಸಹಕಾರ ಸಂಸ್ಥೆಗಳು ಹಾಗೂ ಖಾಸಗಿ ಬ್ಯಾಂಕ್‍ಗಳಿಂದ ಸಾಲ ಪಡೆದ ಸಂತ್ರಸ್ತ ಕುಟುಂಬದವರಿಗೆ ಸಾಲ ಮರುಪಾವತಿ ಮಾಡುವಂತೆ ಯಾವದೇ ರೀತಿಯ ಒತ್ತಡ ತರಬಾರದು ಎಂದು ಸಂಬಂಧಪಟ್ಟ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ಯಾವದೇ ಕಾರಣಕ್ಕೂ ಸಾಲ ಮರು ಪಾವತಿಸುವಂತೆ ಒತ್ತಡ ಉಂಟು ಮಾಡಬಾರದು, ಇಂತಹ ದೂರುಗಳು ಕೇಳಿಬಂದರೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಎಚ್ಚರಿಕೆ ನೀಡಿದರು.

ಮುಂದಿನ ಮೂರು ತಿಂಗಳ ವರೆಗೆ ರಾಷ್ಟ್ರೀಕೃತ ಬ್ಯಾಂಕ್, ಸಹಕಾರ ಸಂಸ್ಥೆಗಳು, ಗ್ರಾಮೀಣ ಅಭಿವೃದ್ಧಿ ಬ್ಯಾಂಕುಗಳು ಹಾಗೂ ಖಾಸಗಿ ಹಣಕಾಸು ಸಂಸ್ಥೆಯಿಂದ ಪಡೆದ ಯಾವದೇ

(ಮೊದಲ ಪುಟದಿಂದ) ರೀತಿಯ ಸಾಲ ಮರು ಪಾವತಿಗೆ ಒತ್ತಡ ಹೇರಿದರೆ ಜನರು ಮತ್ತಷ್ಟು ತೊಂದರೆಗೆ ಸಿಲುಕಿದಂತಾಗುತ್ತದೆ. ಎಲ್ಲಾ ಹಣಕಾಸು ಸಂಸ್ಥೆಗಳು ಅರ್ಥ ಮಾಡಿಕೊಂಡು ಜನರಿಗೆ ಸ್ಪಂದಿಸಬೇಕೆಂದು ಅವರು ನುಡಿದರು.

ಸ್ವಇಚ್ಛೆಯಿಂದ ಸಾಲ ಮರು ಪಾವತಿ ಮಾಡುವಂತಹ ಜನರಿಂದ ಪಾವತಿ ಮಾಡಿಕೊಳ್ಳಲು ಯಾವದೇ ಅಭ್ಯಂತರವಿರುವದಿಲ್ಲ. ಇದನ್ನು ಹೊರತುಪಡಿಸಿ ಒತ್ತಾಯದಿಂದ ಮರುಪಾವತಿಗೆ ಒತ್ತಡ ಹೇರಿದರೆ ಅಂತಹವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವದು ಎಂದು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ತಿಳಿಸಿದರು. ನಬಾರ್ಡ್‍ನ ಸಹಾಯಕ ಪ್ರಬಂಧಕ ಮುಂಡಂಡ ಸಿ. ನಾಣಯ್ಯ ಮಾತನಾಡಿ, ಪ್ರಕೃತಿ ವಿಕೋಪದಿಂದಾಗಿ ಜಿಲ್ಲೆಯ ಎಲ್ಲಾ ಜನರು ಒಂದಲ್ಲ ಒಂದು ರೀತಿಯಲ್ಲಿ ತೊಂದರೆಗೆ ಸಿಲುಕಿದ್ದಾರೆ. ಯಾರಿಂದಲೂ ಸಾಲ ಮರು ಪಾವತಿಗೆ ಒತ್ತಾಯಿಸಬಾರದು ಎಂದು ಅವರು ಕೋರಿದರು.

ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಚಾರುಲತ ಸೋಮಲ್, ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್, ಲೀಡ್ ಬ್ಯಾಂಕ್ ಮುಖ್ಯ ಪ್ರಬಂಧಕರಾದ ಗುಪ್ತಾಜಿ, ಸಹಕಾರ ಸಂಘಗಳ ಉಪ ನಿಬಂಧP ಡಿ. ಭಾಸ್ಕರಾಚಾರ್, ಖಾಸಗಿ ಬ್ಯಾಂಕ್‍ಗಳ ವ್ಯವಸ್ಥಾಪಕರು, ಇತರರು ಇದ್ದರು.