ಮಡಿಕೇರಿ, ಸೆ. 6: ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಹಾಗೂ ಪ್ರಗತಿ ಪರಿಶೀಲನಾ ಸಭೆಯು ಸಂಸದ ಪ್ರತಾಪ್ ಸಿಂಹ ಅವರ ಅಧ್ಯಕ್ಷತೆಯಲ್ಲಿ ತಾ. 7 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಲೀಡ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕರು ತಿಳಿಸಿದ್ದಾರೆ.
ಬೆಳಿಗ್ಗೆ 11.30 ಗಂಟೆಗೆ ನಗರದ ಜಿಲ್ಲಾಸ್ಪತ್ರೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಲಿದ್ದಾರೆ. ಬಳಿಕ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಅತಿವೃಷ್ಟಿ ಸಂಬಂದ ಇದುವರೆಗೆ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಹಾಗೂ ಜಿ.ಪಂ. ಇಂಜಿನಿಯರ್ ಅವರೊಂದಿಗೆ ರಸ್ತೆ ಹಾನಿ ಸಂಬಂಧ ಚರ್ಚೆ ನಡೆಸಲಿದ್ದಾರೆ ಎಂದು ಸಂಸದರ ಆಪ್ತ ಸಹಾಯಕ ಪ್ರದೀಪ್ ತಿಳಿಸಿದ್ದಾರೆ.