ವೀರಾಜಪೇಟೆ, ಸೆ. 5: ವಿದ್ಯಾರ್ಥಿಗಳ ಜೀವನದ ಕನಸನ್ನು ಸಾಕಾರಗೊಳಿಸುವಲ್ಲಿ ಗುರುಗಳ ಪಾತ್ರ ಮಹತ್ತರವಾದದ್ದು ಎಂದು ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ ಹೇಳಿದರು.

ಸಂತ ಅನ್ನಮ್ಮ ದ್ವಿಶತಮಾನೋ ತ್ಸವ ಸಭಾಂಗಣದಲ್ಲಿ ಆಯೋಜಿಸ ಲಾಗಿದ್ದ ಶಿಕ್ಷಕರ ದಿನಾಚರಣೆಯ ಸರಳ ಸಮಾರಂಭದಲ್ಲಿ ಮಾತನಾಡಿ ಮಾತು ಕಲಿಸಿದ ಹೆತ್ತವರು, ಅಕ್ಷರ ಕಲಿಸಿದ ಶಿಕ್ಷಕರನ್ನು ಎಂದಿಗೂ ಮರೆಯಬಾರದು ಎಂದರು.

ಸಂತ ಅನ್ನಮ್ಮ ಸಂಸ್ಥೆಯ ಪ್ರಾಂಶುಪಾಲ ರೆ:ಫಾ: ಮದಲೈ ಮುತ್ತು

ವೀರಾಜಪೇಟೆ, ಸೆ. 5: ವಿದ್ಯಾರ್ಥಿಗಳ ಜೀವನದ ಕನಸನ್ನು ಸಾಕಾರಗೊಳಿಸುವಲ್ಲಿ ಗುರುಗಳ ಪಾತ್ರ ಮಹತ್ತರವಾದದ್ದು ಎಂದು ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ ಹೇಳಿದರು.

ಸಂತ ಅನ್ನಮ್ಮ ದ್ವಿಶತಮಾನೋ ತ್ಸವ ಸಭಾಂಗಣದಲ್ಲಿ ಆಯೋಜಿಸ ಲಾಗಿದ್ದ ಶಿಕ್ಷಕರ ದಿನಾಚರಣೆಯ ಸರಳ ಸಮಾರಂಭದಲ್ಲಿ ಮಾತನಾಡಿ ಮಾತು ಕಲಿಸಿದ ಹೆತ್ತವರು, ಅಕ್ಷರ ಕಲಿಸಿದ ಶಿಕ್ಷಕರನ್ನು ಎಂದಿಗೂ ಮರೆಯಬಾರದು ಎಂದರು.

ಸಂತ ಅನ್ನಮ್ಮ ಸಂಸ್ಥೆಯ ಪ್ರಾಂಶುಪಾಲ ರೆ:ಫಾ: ಮದಲೈ ಮುತ್ತು ಶಿಕ್ಷಕರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ತಾಲೂಕು ಪಂಚಾಯಿತಿ ಸದಸ್ಯರುಗಳಾದ ಆಲತಂಡ ಸೀತಮ್ಮ, ಕಾವೇರಮ್ಮ, ಆಶಾಜೇಮ್ಸ್, ಕದನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾ, ಸಂತ ಅನ್ನಮ್ಮ ಶಾಲಾ ಮುಖ್ಯೋಪಧ್ಯಾಯಿನಿ ಮಾರ್ಗರೇಟ್, ದೈಹಿಕ ಶಿಕ್ಷಣ ಪರಿವೀಕ್ಷಕಿ ಪಿ.ಡಿ ರತಿ, ಬಿ.ಆರ್.ಸಿ ಅಧಿಕಾರಿ ಉತ್ತಪ್ಪ ಉಪಸ್ಥಿತರಿದ್ದರು. ಬಿಇಒ ಲೋಕೇಶ್ ಸ್ವಾಗತಿಸಿದರು. ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಪ್ರಕೃತಿ ವಿಕೋಪದಲ್ಲಿ ಸಿಲುಕಿ ಮಡಿದವರಿಗೆ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.