ಸಿದ್ದಾಪುರ, ಸೆ. 6: ಅಮ್ಮತ್ತಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಪಿ.ಎಸ್. ಶಾಂತ ಹಾಗೂ ಉಪಾಧ್ಯಕ್ಷರಾಗಿ ಸಿ.ಎಂ. ನಾಚಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಪ್ರತಿಸ್ಪರ್ಧಿಗಳು ಇಲ್ಲದ ಕಾರಣ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಚುನಾವಣಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾದ ಬಗ್ಗೆ ಘೋಷಿಸಿದರು. ವೀರಾಜಪೇಟೆ ತಾಲೂಕು ತಹಶೀಲ್ದಾರ್ ಗೋವಿಂದ ರಾಜ್, ಪಿ.ಡಿ.ಓ. ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳು ಇದ್ದರು.