ಶನಿವಾರಸಂತೆ,ಸೆ. 6: ಇಲ್ಲಿಗೆ ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿಯ ಮಾಸಿಕ ಸಭೆ ಪಂಚಾಯಿತಿ ಅಧ್ಯಕ್ಷ ಸಿ.ಜೆ. ಗಿರೀಶ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಬಾರಿಯ ಮಳೆಯಿಂದ ಕಾಫಿ, ಕಾಳುಮೆಣಸು, ಭತ್ತ, ಶುಂಠಿ, ಕಿತ್ತಳೆ ಮುಂತಾದ ಬೆಳೆಗಳು ನೆಲಕಚ್ಚಿ ರೈತರು ಅಪಾರ ಕಷ್ಟ ನಷ್ಟ ಅನುಭವಿಸಿದುದರಿಂದ ಆ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವಂತೆ ನಿರ್ಣಯ ಕೈಗೊಳ್ಳಲಾಯಿತು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 20 ನಿವಾಸಿಗಳ ಮನೆಗಳು ಮಳೆಗಾಳಿಯಿಂದಾಗಿ ಕುಸಿದಿದ್ದು, ನಿರಾಶ್ರಿತರಾದ ಫಲಾನುಭವಿಗಳಿಗೆ ಬಸವ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಿ ಕೊಡುವಂತೆ ಜಿಲ್ಲಾ ಪಂಚಾಯ್ತಿಯು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸುವಂತೆಯೂ ನಿರ್ಣಯಿಸಲಾಯಿತು.