ಸೋಮವಾರಪೇಟೆ, ಸೆ. 6: ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾನಿಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು. ಕೃಷ್ಣನ ವಿಗ್ರಹವನ್ನು ಹೂವು, ದೀಪಗಳಿಂದ ಅಲಂಕರಿಸಿ, ಸಾಮೂಹಿಕವಾಗಿ ಪೂಜೆ ಸಲ್ಲಿಸಲಾಯಿತು. ಪೂಜಾ ಕಾರ್ಯದಲ್ಲಿ ವಿಶ್ವವಿದ್ಯಾನಿಲಯದ ಸಂಚಾಲಕಿ ದಾಕ್ಷಾಯಿಣಿ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.