ಮೂರ್ನಾಡು, ಸೆ. 7: ಸರ್ಕಾರದಿಂದ ಕೊಡಗು ಜಿಲ್ಲೆಯ ಪ್ರಕೃತಿ ವಿಕೋಪಕ್ಕೆ ಒಳಗಾದ ಸಂತ್ರಸ್ತರಿಗೆ ವಿಶೇಷ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ವಿತರಿಸಲಾದ ಉಚಿತ ಆಹಾರ ಧಾನ್ಯವನ್ನು ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಸಮುದಾಯ ಭವನದಲ್ಲಿ ಪಡಿತರ ಚೀಟಿ ಫಲಾನುಭವಿಗಳಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಲ್ಲುಮುಟ್ಲು ಜಮುನ, ಉಪಾಧ್ಯಕ್ಷ ಕುಂಞಪ್ಪ ಪವಿತ್ರ, ಪಿಡಿಓ ವೇಣುಗೋಪಾಲ್, ಸದಸ್ಯರು ಹಾಗೂ ಸಿಬ್ಬಂದಿ ಹಾಜರಿದ್ದರು.