ಕೂಡಿಗೆ, ಸೆ. 7: ವಿಶೇಷ ಅನ್ನಭಾಗ್ಯ ಯೋಜನೆಯಡಿಯಲ್ಲಿ ಆಹಾರ ಇಲಾಖೆಯ ವತಿಯಿಂದ ಬಿಪಿಎಲ್ ಪಡಿತರ ಚೀಟಿ ಹೊಂದಿದ ಫಲಾನುಭವಿಗಳಿಗೆ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಮಾಡಲಾಯಿತು.
ಆಹಾರ ಇಲಾಖೆ ವತಿಯಿಂದ ಬಂದಿರುವ ಮುಳ್ಳುಸೋಗೆ ಮತ್ತು ಜನತಾ ಕಾಲೋನಿಯ ಕಾರ್ಡುದಾರರಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವ್ಯ ಸಾಂಕೇತಿಕವಾಗಿ ವಿತರಿಸಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಾನಂದ, ವಿಜಯ್ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಶೇಖರ್ ಇದ್ದರು.