ಪಾಲಿಬೆಟ್ಟ, ಸೆ. 7: ಪಾಲಿಬೆಟ್ಟ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಕೊಡಗು ಪುನರ್ ನಿರ್ಮಾಣಕ್ಕೆ ನಿಧಿ ಸಂಗ್ರಹ ಮಾಡಲಾಯಿತು.

ಇತ್ತೀಚೆÀಗೆ ಪ್ರಕೃತಿ ವಿಕೋಪಕ್ಕೊಳಗಾದ ಕೊಡಗು ಜಿಲ್ಲೆಯ ಪುನರ್ ನಿರ್ಮಾಣಕ್ಕೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಎನ್.ಎಸ್.ಎಸ್. ಸಂಯೋಜನಾಧಿಕಾರಿಗಳ ಆದೇಶದಂತೆ ಪಾಲಿಬೆಟ್ಟ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಘಟಕವು ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಾರ್ವಜನಿಕರಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ. 10,750ನ್ನು ಸಂಗ್ರಹಿಸಲಾಯಿತು. ಸಂಗ್ರಹಿಸಿದ ಹಣವನ್ನು ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಸಂದಾಯ ಮಾಡಲಾಯಿತು.