ಸೋಮವಾರಪೇಟೆ, ಸೆ. 7: ತಾಲೂಕಿನ ಅಬ್ಬೂರುಕಟ್ಟೆ-ಹೊಸಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಶ್ರೀಬಸವೇಶ್ವರ ದೇವಾಲಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ರೂ. 1 ಲಕ್ಷ ಆರ್ಥಿಕ ನೆರವು ಒದಗಿಸಿದ್ದಾರೆ.
ಶ್ರೀ ಕ್ಷೇತ್ರದಿಂದ ಬಿಡುಗಡೆಯಾದ ಅನುದಾನದ ಚೆಕ್ಅನ್ನು ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ವೈ. ಪ್ರಕಾಶ್ ದೇವಾಲಯ ಸಮಿತಿಗೆ ಹಸ್ತಾಂತರಿಸಿದರು. ಈ ಸಂದರ್ಭ ನೇರುಗಳಲೆ ಗ್ರಾ.ಪಂ. ಅಧ್ಯಕ್ಷ ತಿಮ್ಮಯ್ಯ, ಸದಸ್ಯ ವಿನುಕುಮಾರ್, ದೇವಾಲಯ ಸಮಿತಿ ಅಧ್ಯಕ್ಷ ಲೋಕೇಶ್, ಉಪಾಧ್ಯಕ್ಷ ಪೊನ್ನಪ್ಪ, ಕಾರ್ಯದರ್ಶಿ ಬೋಜೇಗೌಡ, ಯೋಜನೆಯ ವಲಯ ಮೇಲ್ವಿಚಾರಕ ರಮೇಶ್, ಸೇವಾಪ್ರತಿನಿಧಿ ಶೈಲ ಮುಂತಾದವರು ಉಪಸ್ಥಿತರಿದ್ದರು.