ಸೋಮವಾರಪೇಟೆ, ಸೆ. 7: ಪ್ರತಿ ವರ್ಷ ಅದ್ದೂರಿಯಾಗಿ, ಈ ಭಾಗದ ದಸರಾ ಮಾದರಿಯಲ್ಲಿ ಆಚರಿಸಲ್ಪಡುತ್ತಿದ್ದ ಆಯುಧ ಪೂಜೋತ್ಸವವನ್ನು ಪ್ರಸಕ್ತ ಸಾಲಿನಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಲಾಯಿತು.
ಇಲ್ಲಿನ ವಾಹನ ಚಾಲಕರು ಮತ್ತು ಮಾಲೀಕರ ಸಂಘದಿಂದ ಆಯುಧ ಪೂಜೆಯನ್ನು ಸರಳವಾಗಿ ಆಚರಿಸಲು ಸಂಘದ ಅಧ್ಯಕ್ಷ ಸಿ.ಸಿ. ನಂದ ಅವರ ಅಧ್ಯಕ್ಷತೆಯಲ್ಲಿ ಪತ್ರಿಕಾಭವನದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಪ್ರಕೃತಿ ವಿಕೋಪಕ್ಕೆ ಸಾಕಷ್ಟು ಹಾನಿಯಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಈ ನಿಟ್ಟಿನಲ್ಲಿ ಆಯುಧ ಪೂಜೆಯನ್ನು ಅಕ್ಟೋಬರ್ 18ರಂದು ಸರಳವಾಗಿ ಆಚರಿಸಲಾಗುvದು. ಅಂದು ಬೆಳಿಗ್ಗೆ ಪಟ್ಟಣದ ಎಲ್ಲ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಾಗುವದು. ನಂತರ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಗುವದು. ಸರಳ ಪೂಜೆಯಿಂದ ಉಳಿಸಿದ ಹಣದಲ್ಲಿ ನೆರೆ ಸಂತ್ರಸ್ಥರ ನಿಧಿಗೆ ರೂ. 50 ಸಾವಿರ ನೀಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು
ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಪರಮೇಶ್ಗೌಡ, ಕಾರ್ಯದರ್ಶಿ ಬಾಲಕೃಷ್ಣ ಪೂಜಾರಿ, ಸಹ ಕಾರ್ಯದರ್ಶಿ ಪ್ರಕಾಶ್, ಖಜಾಂಚಿ ಖಾದರ್, ಸಲಹೆಗಾರರಾದ ಎ.ಪಿ. ವೀರರಾಜು, ಕೆ.ಜಿ. ಸುರೇಶ್, ಟಿ.ಕೆ. ರಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.