ಕೂಡಿಗೆ, ಸೆ. 7: ಸಮೀಪದ ಶಿರಂಗಾಲ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಪಿ. ರಾಜ ಹಾಗೂ ಉಪಾಧ್ಯಕ್ಷರಾಗಿ ರತ್ನಮ್ಮ ಅವರು ಆಯ್ಕೆಗೊಂಡಿದ್ದಾರೆ.
ಚುನಾವಣೆ ಪ್ರಕ್ರಿಯೆಯಲ್ಲಿ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಮಾಡಲಾಯಿತು. ಚುನಾವಣಾಧಿಕಾರಿಯಾಗಿ ಶಿರಂಗಾಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್ ಕಾರ್ಯನಿರ್ವಹಿಸಿದರು.