ಕುಶಾಲನಗರ, ಸೆ. 7: ನದಿ ನೀರಿನ ಗುಣಮಟ್ಟ ಪರಿಶೀಲನೆ ನಡೆಸುವ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ತಂಡ ಕುಶಾಲನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆಗಳ ನದಿಪಾತ್ರದಿಂದ ನೀರಿನ ಮಾದರಿಯನ್ನು ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಮೈಸೂರು ವಿಭಾಗದ ನಿಗಮದ ಅಧಿಕಾರಿ ಅಮರ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಕುಶಾಲನಗರದಲ್ಲಿ ಕಾವೇರಿ ನದಿ ಸೇರಿದಂತೆ ಹಾರಂಗಿ, ಚಿಕ್ಲಿಹೊಳೆ ಮುಂತಾದೆಡೆಗಳಿಂದ ನೀರಿನ ಮಾದರಿಯನ್ನು ಸಂಗ್ರಹಿಸಿ ನಂತರ ಪ್ರಯೋಗಾಲಯಕ್ಕೆ ಕಳುಹಿಸಲು ಕ್ರಮಕೈಗೊಂಡಿದ್ದಾರೆ.