ಮಡಿಕೇರಿ, ಸೆ.7 : ಪ್ರಕೃತಿ ವಿಕೋಪದಿಂದ ಜಿಲ್ಲೆ ಸಾಕಷ್ಟು ಕಷ್ಟ, ನಷ್ಟಗಳನ್ನು ಅನುಭವಿಸುತ್ತಿರುವದರಿಂದ ಈ ಬಾರಿ ಕೈಲ್ ಮುಹೂರ್ತ ಹಬ್ಬವನ್ನು ಕೊಡವ ಸಮಾಜಗಳ ಒಕ್ಕೂಟ ಹಾಗೂ ಕೊಡವ ಮಕ್ಕಡ ಕೂಟದ ವತಿಯಿಂದ ಸರಳ ರೀತಿಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಒಕ್ಕೂಟದ ಗೌರವ ಕಾರ್ಯದರ್ಶಿ ವಾಟೇರಿರ ಶಂಕರಿ ಪೂವಯ್ಯ ತಿಳಿಸಿದ್ದಾರೆ. ತಾ. 9 ರಂದು ಬೆಳಿಗ್ಗೆ 10 ಗಂಟೆಗೆ ಬಾಳುಗೋಡುವಿನಲ್ಲಿ ಸಾಂಪ್ರದಾಯಿಕವಾಗಿ ಆಯುಧಗಳಿಗೆ ಪೂಜೆ ಸಲ್ಲಿಸಲಾಗುವದು. ನಂತರ ಪ್ರಕೃತಿ ವಿಕೋಪದಿಂದ ಮೃತಪಟ್ಟವರಿಗಾಗಿ ಶ್ರದ್ಧಾಂಜಲಿ ಸಭೆ ನಡೆಸಿ ಸಂತಾಪ ಸೂಚಿಸಲಾಗುವದು ಎಂದು ಶಂಕರಿ ಪೂವಯ್ಯ ತಿಳಿಸಿದ್ದಾರೆ.