ಮಡಿಕೇರಿ, ಸೆ. 7: ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದ ಹಿನ್ನೆಲೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯು ಸದ್ಯಕ್ಕೆ ಯಾವದೇ ಮನೋರಂಜನಾ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸದೇ ಇರಲು ನಿರ್ಣಯ ಕೈಗೊಂಡಿದೆ.
ಅಕಾಡೆಮಿ ಅಧ್ಯಕ್ಷ ಪೆಮ್ಮಂಡ ಕೆ. ಪೊನ್ನಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಪ್ರಕೃತಿ ವಿಕೋಪ ದಲ್ಲಿ ಪ್ರಾಣ ಕಳೆದುಕೊಂಡವರಿಗೆ ಹಾಗೂ ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಎ.ಬಿ. ವಾಜಪೇಯಿ ಇವರುಗಳಿಗೆ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು.