ಗುಡ್ಡೆಹೊಸೂರು, ಸೆ. 7: ಇಲ್ಲಿಗೆ ಸಮೀಪದ ಬಸವನಹಳ್ಳಿಯ ಪ್ರೌಢಶಾಲಾ ಮೈದಾನದಲ್ಲಿ ಕುಶಾಲನಗರ ಕ್ಲಸ್ಟರ್ ಬಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ಗುಡ್ಡೆಹೊಸೂರು ಗ್ರಾ.ಪಂ. ಅಧ್ಯಕ್ಷೆ ಕೆ.ಎಸ್. ಭಾರತಿ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು.

ಪಂದ್ಯಾಟದಲ್ಲಿ ಕ್ಲಸ್ಟರ್‍ಮಟ್ಟದ ಒಟ್ಟು 12 ಶಾಲೆಗಳ ಬಾಲಕ, ಬಾಲಕಿಯರು ಭಾಗವಹಿಸಿದ್ದರು, ಕಬಡ್ಡಿ, ವಾಲಿಬಾಲ್, ಥ್ರೋಬಾಲ್ ಪಂದ್ಯಾಟಗಳು ನಡೆದವು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ. ಅಧ್ಯಕ್ಷ ಪುರುಷೋತ್ತಮ್ ವಹಿಸಿದ್ದರು. ವೇದಿಕೆಯಲ್ಲಿ ನಿವೃತ್ತ ಶಿಕ್ಷಕಿ ಕೆ.ಕೆ. ಶೇಷಮ್ಮ, ಎಸ್.ಡಿ.ಎಂ.ಸಿ.ಯ ಮಾಜಿ ಅಧ್ಯಕ್ಷ ಬಿ.ಎನ್. ಚಂದ್ರ, ಕೆ.ಎನ್. ಚಂದ್ರಶೇಖರ್, ಬಿ.ಎಸ್. ಧನಪಾಲ್, ಬಿ.ಎನ್. ಶುಭಶೇಖರ್ ಮತ್ತು ಶಿಕ್ಷಕರ ಸಂಘದ ದಯಾನಂದ, ನಾಗರಾಜ್ ಹಾಜರಿದ್ದರು, ಶಾಲೆಯ ದೈಹಿಕ ಶಿಕ್ಷಕ ಲಕ್ಷ್ಮಣ್ ಸ್ವಾಗತಿಸಿದರು. ಶಿಕ್ಷಕ ಶ್ರೀನಿವಾಸ ಕಾರ್ಯಕ್ರಮ ನಿರೂಪಿದರು. ವಿವಿಧೆಡೆಗಳ ದೈಹಿಕ ಶಿಕ್ಷಕರು ಹಾಜರಿದ್ದರು.