ಮಡಿಕೇರಿ, ಸೆ. 9: ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಒಳಗಾಗಿರುವ ಬಿಪಿಎಲ್ ಮತ್ತು ಎಪಿಎಲ್ ಸಂತ್ರಸ್ತ ಕುಟುಂಬದವರಿಗೆ ವಿಶೇಷ ಅನ್ನಭಾಗ್ಯ ಯೋಜನೆಯಡಿ ಸರ್ಕಾರ 50 ಸಾವಿರ ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಲಾಗುತ್ತಿದೆ.

ಆ ದಿಸೆಯಲ್ಲಿ ಇದುವರೆಗೆ 45,830 ಆಹಾರ ಕಿಟ್‍ಗಳು ಜಿಲ್ಲೆಗೆ ಬಂದಿದ್ದು, ಈಗಾಗಲೇ 44,647 ಆಹಾರ ಕಿಟ್‍ಗಳನ್ನು ವಿತರಿಸಲಾಗಿದೆ. ಮಡಿಕೇರಿ ತಾಲೂಕಿನಲ್ಲಿ 24,768, ಮತ್ತು ಸೋಮವಾರಪೇಟೆ ತಾಲೂಕಿನಲ್ಲಿ 15,159 ಮತ್ತು ವೀರಾಜಪೇಟೆ ತಾಲೂಕಿನಲ್ಲಿ 4,720 ಆಹಾರ ಕಿಟ್‍ಗಳನ್ನು ವಿತರಿಸಲಾಗಿದೆ ಎಂದು ಆಹಾರ ಇಲಾಖೆ ಉಪ ನಿರ್ದೇಶಕ ಸದಾಶಿವಯ್ಯ ಮಾಹಿತಿ ನೀಡಿದ್ದಾರೆ.