ಮೂರ್ನಾಡು, ಸೆ. 9: ಮೂರ್ನಾಡು ಪದವಿ ಕಾಲೇಜಿನಲ್ಲಿ ಶಿಕ್ಷಕರ ದಿನವನ್ನು ಆಚರಿಸಲಾಯಿತು. ದಿನದ ಮಹತ್ವದ ಕುರಿತು ಕನ್ನಡ ವಿಭಾಗದ ಉಪನ್ಯಾಸಕಿ ಕಲ್ಪನ ಮಾತನಾಡಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್‍ರ ಬಗ್ಗೆ ಹಾಗೂ ಅವರು ರಾಷ್ಟ್ರಕ್ಕೆ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಅಮೂಲ್ಯ ಕೊಡುಗೆಯ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ, ಗುರಿ ತಲಪಲು ಗುರುವಿನ ಮಾರ್ಗದರ್ಶನ ಬಹಳ ಅಗತ್ಯ ಉತ್ತಮ. ಸಮಾಜದ ನಿರ್ಮಾಣ ಮಾಡುವ ಗುರುತರ ಜವಾಬ್ದಾರಿ ಶಿಕ್ಷಕನದ್ದಾಗಿರುತ್ತದೆ ಎಂದು ನುಡಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ ವರ್ಗದವರು ಹಾಜರಿದ್ದರು. ತಮ್ಮ ಶಿಕ್ಷಕರನ್ನು ವಿದ್ಯಾರ್ಥಿಗಳು ಹೂ ಗುಚ್ಚ ನೀಡಿ ಗೌರವಿಸಿದರು. ಉಪನ್ಯಾಸಕ ಹರ್ಷ ಮಂದಣ್ಣ ಕಾರ್ಯಕ್ರಮ ನಿರೂಪಿಸಿದರು.