ಒಡೆಯನಪುರ, ಸೆ. 10: ಶನಿವಾರಸಂತೆ ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ ಮತ್ತು ಹಾಸನದ ವಿ-ಕೇರ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆಶ್ರಯದಲ್ಲಿ ಶಾಲೆಯ ವಿದ್ಯಾರ್ಥಿಗಳು ಮತ್ತು ಪೋಷಕರಿಗಾಗಿ ದಂತ ತಪಾಸಣೆ ಮತ್ತು ಕಣ್ಣಿನ ತಪಾಸಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಯಿತು. ಆರೋಗ್ಯ ಶಿಬಿರದ ಕುರಿತು ಮಾತನಾಡಿದ ಸಂಸ್ಥೆ ಅಧ್ಯಕ್ಷೆ ಡಿ. ಸುಜಲಾದೇವಿ-ವಿದ್ಯಾರ್ಥಿಗಳ ಆರೋಗ್ಯದತ್ತ ಪೋಷಕರು ಹೆಚ್ಚಿನ ಗಮನಹಿಸಬೇಕು, ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಆರೋಗ್ಯದತ್ತ ಕಾಳಜಿ ವಹಿಸಿದರೆ ಮಾನಸಿಕ ಮತ್ತು ದೈಹಿಕ ಆರೋಗ್ಯ ವೃದ್ದಿಸುತ್ತದೆ ಎಂದರು.

ಹಾಸನದ ವಿ-ಕೇರ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ದಂತ ತಜ್ಞ ಡಾ. ಕೆ. ವಿ. ವೈಭವ್, ಡಾ. ಪ್ರಿಜ್‍ಜ್ಹಾನ್ ನೇತೃತ್ವದ ತಂಡ ಎಲ್ಲಾ ವಿದ್ಯಾರ್ಥಿಗಳಿಗೆ ದಂತ ತಪಾಸಣೆ ಮತ್ತು ಕಣ್ಣಿನ ತಪಾಸಣೆಯನ್ನು ನಡೆಸಿದರು. ಈ ಸಂದರ್ಭ ವಿದ್ಯಾರ್ಥಿ ಪೋಷಕರಿಗೆ ಹಾಗೂ ವಿದ್ಯಾಸಂಸ್ಥೆ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ವಿದ್ಯಾಸಂಸ್ಥೆ ಕಾರ್ಯದರ್ಶಿ ಗುರುಪ್ರಸಾದ್ ಹಾಜರಿದ್ದರು.