ವೀರಾಜಪೇಟೆ, ಸೆ.14: ವೀರಾಜಪೇಟೆಯಲ್ಲಿರುವ ಕೊಡಗು ಮಾಜಿ ಸೈನಿಕರ ಸಹಕಾರ ಸಂಘದ ವತಿಯಿಂದ ತಾ. 17ರಂದು ಇಲ್ಲಿನ ಮಿನಿ ವಿಧಾನ ಸೌಧದ ಮುಂದಿರುವ ಯೋಧರ ಸ್ಮಾರಕ ಸ್ಥಂಭದ ಆವರಣದಲ್ಲಿ ಮಾಜಿ ಯೋಧರಿಗೆ ಶ್ರದ್ಧಾಂಜಲಿಯನ್ನು ಅರ್ಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಆಡಳಿತ ಮಂಡಳಿ ತಿಳಿಸಿದೆ.
ಬೆಳಿಗ್ಗೆ 10.30ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಸ್ತುವಾರಿ ಸಚಿವ ಸಾ.ರಾ. ಮಹೇಶ್, ಶಾಸಕರಾದ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.