ಮಡಿಕೇರಿ, ಸೆ. 14: ಅಂಚೆ ಅದಾಲತ್ ಮುಂದಿನ ಸಭೆಯು ತಾ. 18 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಅಂಚೆ ವಿಭಾಗದ, ವಿಭಾಗೀಯ ಕಚೇರಿಯಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸ ಲಾಗುತ್ತದೆ. ತಾ. 18 ರಂದು ನಡೆಯುವ ಸಭೆಯಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಬಂದು ಭಾಗವಹಿಸಬಹುದು ಎಂದು ನಗರದ ಪ್ರಧಾನ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.