ಮಡಿಕೇರಿ, ಸೆ. 14: ಅಂಗನವಾಡಿ ಕೇಂದ್ರದ ಮಕ್ಕಳಿಗೆ ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪ್ಪಂಡ ಮಹೇಶ್ ಗಣಪತಿ ಹೆಗ್ಗಳದ ನಿರ್ಮಲಗಿರಿಯಲ್ಲಿ ಸಮವಸ್ತ್ರಗಳನ್ನು ವಿತರಿಸಿದರು.ಕಾರ್ಯಕ್ರಮದಲ್ಲಿ ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಸವಿತಾ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಸದಸ್ಯೆ ಲೀಲಾವತಿ ಹಾಗೂ ಸರಸ್ವತಿ, ಅಂಗನವಾಡಿ ಸಹಾಯಕಿ ಸುಬೈದ, ಮಕ್ಕಳ ತಾಯಂದಿರು ಉಪಸ್ಥಿತರಿದ್ದರು.ಅಂಗನವಾಡಿ ಕಾರ್ಯಕರ್ತೆ ಕೆ.ಸಿ. ಸೌಮ್ಯ ಸ್ವಾಗತಿಸಿದರು. ಆಶಾ ಕಾರ್ಯಕರ್ತೆ ಗಾಯತ್ರಿ ವಂದಿಸಿದರು.