ಮಡಿಕೇರಿ, ಸೆ. 14: ಕರ್ನಾಟಕ ರಾಜ್ಯ ಸರ್ಕಾರವು ಸಣ್ಣ ರೈತರಿಗೆ, ಭೂರಹಿತ ಕೃಷಿ ಕಾರ್ಮಿಕರಿಗೆ ಹಾಗೂ ಅಶಕ್ತ ವರ್ಗದ ಜನರಿಗೆ ಸಾಲ ಮರುಪಾವತಿಗಾಗಿ ಅನಧಿಕೃತ ಒತ್ತಡ, ಕಿರುಕುಳವನ್ನು ತಪ್ಪಿಸುವ ನಿಟ್ಟಿನಲ್ಲಿ ಋಣಭಾರ ಮಸೂದೆ - 2018 ನ್ನು ಜಾರಿಗೊಳಿಸುವ ಚಿಂತನೆ ನಡೆಸಿದ್ದು, ಕೊಡಗು ಜಿಲ್ಲೆಯಲ್ಲಿ ಹೆಚ್ಚು ಪ್ರಮಾಣದಲ್ಲಿ ಬಡ್ಡಿಯನ್ನು ವಸೂಲಿ ಮಾಡುವದು ಮತ್ತು ಸಾಲ ಮರುಪಾವತಿಗಾಗಿ ಸಾರ್ವಜನಿಕರಿಗೆ, ರೈತರಿಗೆ ಶೋಷಿಸುತ್ತಿರುವವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ಬಗ್ಗೆ ಕೊಡಗು ಜಿಲ್ಲಾ ಕಂಟ್ರೋಲ್ ರೂಂನಲ್ಲಿ ಸಹಾಯವಾಣಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಸಾರ್ವಜನಿಕರು ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ: 08272-228330, 220720ಗೆ ಕರೆ ಮಾಡಿ ಹೆಚ್ಚು ಪ್ರಮಾಣದಲ್ಲಿ ಬಡ್ಡಿಯನ್ನು ವಸೂಲಿ ಮಾಡುವವರ, ಸಾಲ ಮರುಪಾವತಿಗಾಗಿ ಸಾರ್ವಜನಿಕರು, ರೈತರನ್ನು ಶೋಷಿಸುತ್ತಿರುವವರ ಬಗ್ಗೆ ಮಾಹಿತಿ ನೀಡುವಂತೆ ಪೊಲೀಸ್ ಅಧೀಕ್ಷಕರು ಸಾರ್ವಜನಿಕರಲ್ಲಿ ಕೋರಿದ್ದಾರೆ.