*ಸುಂಟಿಕೊಪ್ಪ, ಸೆ. 12: ವಿದ್ಯಾರ್ಥಿಗಳು ಜೀವನದಲ್ಲಿ ನೈತಿಕ ಮೂಲ್ಯಗಳನ್ನು ಮೈಗೂಡಿಸಿಕೊಂಡು ವಿದ್ಯಾರ್ಜನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಸರಕಾರಿ ಪದವಿಪೂರ್ವ ಕಾಲೇಜಿನ ಉಪಾಧ್ಯಕ್ಷ ವೈ.ಎಂ.ಕುರುಂಬಯ್ಯ ಹೇಳಿದರು.ಇಲ್ಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಂದನೆ ಕಾರ್ಯಕ್ರಮ ಹಾಗೂ ಕಾಲೇಜಿನಲ್ಲಿ ನಡೆದ 2018-19ನೇ ಸಾಲಿನ ವಿದ್ಯಾರ್ಥಿಗಳ ಸಾಂಸ್ಕøತಿಕ ಮತ್ತು ಕ್ರೀಡಾ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪಿ.ಎಸ್.ಜಾನ್ ಮಾತನಾಡಿ, ಸವರ್Àಪಲ್ಲಿ ರಾಧಾಕೃಷ್ಣನ್ ಹಾಗೂ ವಿದ್ಯಾರ್ಥಿಗಳ ಮಧ್ಯೆ ಆತ್ಮೀಯ ಸಂಬಂಧವಿತ್ತು. ಅವರು ಒಮ್ಮೆ ವರ್ಗಾವಣೆಯಾದಾಗ ವಿದ್ಯಾರ್ಥಿಗಳು ಅವರನ್ನು ಭುಜದಲ್ಲಿ ಕುಳ್ಳಿರಿಸಿ ಮೆರವಣಿಗೆ ನಡೆಸಿದ್ದೇ ಅದಕ್ಕೆ ಸಾಕ್ಷಿ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಗುರುಗಳ ಜೊತೆಯಲ್ಲಿ ಆತ್ಮೀಯ ಸಂಬಂಧ ಬೆಳೆಸುವದು ಬಹಳ ಮುಖ್ಯ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಉಪನ್ಯಾಸಕ ಸೋಮಚಂದ್ರ ಮಾತನಾಡಿ, ಜೀವನದಲ್ಲಿ ಎಲ್ಲಾ ಗಳಿಸಿದರೂ ಉಳಿಯುವದು ಜ್ಞಾನ ಒಂದೇ ಎಂದು ಹೇಳಿದರು.
ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಉಪನ್ಯಾಸಕ ಎಸ್.ಹೆಚ್.ಈಶ ಬೋಧಿಸಿದರು. ಉಪನ್ಯಾಸಕ ಬಿ.ಎಂ.ಬೆಳ್ಳಿಯಪ್ಪ ವಿದ್ಯಾರ್ಥಿಗಳ ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕೆಂದರು. ಕಾಲೇಜಿಗೆ ಗಣಕಯಂತ್ರವನ್ನು ನೀಡಿದ ಜೇಸಿ ಅಧ್ಯಕ್ಷ ಅರುಣ್ ಕುಮಾರ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭ ಸಿಬಿಸಿ ಖಜಾಂಚಿ ರಮೇಶ್ ಪಿಳ್ಳೆ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಿಂದು ಸ್ವಾಗತಿಸಿ, ಹರ್ಷಿತ ಕಾರ್ಯಕ್ರಮ ನಿರೂಪಿಸಿ, ಅಲ್ಮಾ ವಂದಿಸಿದರು.