ಮಡಿಕೇರಿ, ಸೆ. 12: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಚಿಕಾಗೊ ಉಪನ್ಯಾಸದ 125ನೇ ವರ್ಷಾಚರಣೆ ಸಮಾರಂಭವು ಮಂಗಳವಾರ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕಾಲೇಜು ಪ್ರಾಂಶುಪಾಲರಾದ ಡಾ.ಪಾರ್ವತಿ ಅಪ್ಪಯ್ಯ ಅವರು ಯುವಜನತೆ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ತಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಹೇಳಿದರು.

ಉಪನ್ಯಾಸಕರಾದ ಡಾ.ಸೋಮಣ್ಣ ಅವರು ಮಾತನಾಡಿ ಸ್ವಾಮಿ ವಿವೇಕಾನಂದರು ಅಮೇರಿಕಾದ ಚಿಕಾಗೊದಲ್ಲಿ ಉಪನ್ಯಾಸ ನೀಡಿ ಇಂದಿಗೆ 125 ವರ್ಷಗಳಾಗಿವೆ. ಅವರು ಅಂದು ಆಡಿದ ಮಾತುಗಳು ಇಂದಿಗೂ ಸತ್ವಯುತವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಿಡಿಪಿಐ ವಾಲ್ಟರ್ ಡಿಮೆಲ್ಲೋ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ರಕ್ಷಣಾಧಿಕಾರಿ ಮಮ್ತಾಜ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೆ.ಟಿ. ದರ್ಶನ್ ಇತರರು ಇದ್ದರು.