ನಾಪೆÇೀಕ್ಲು, ಸೆ. 14: ವಿದ್ಯಾರ್ಥಿ ಜೀವನದಲ್ಲಿ ಕ್ರೀಡಾಕೂಟಗಳಲ್ಲಿ ಭಾಗವಹಿಸುವದು ಮರೆಯಲಾರದ ಅನುಭವ ಎಂದು ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ನೆಲ್ಲಚಂಡ ಕಿರಣ್ ಕಾರ್ಯಪ್ಪ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯಿತಿ ಮತ್ತು ನಾಪೆÇೀಕ್ಲು ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕ್ರೀಡಾ ಕೂಟದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಕೊಡಗು ಕ್ರೀಡೆಯ ತವರೂರು ಎಂದು ಖ್ಯಾತಿ ಪಡೆದಿದೆ. ಕ್ರೀಡಾ ಕೂಟಗಳು ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ವೇದಿಕೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಕ್ರೀಡಾ ಜ್ಯೋತಿ ಬೆಳಗಿಸಿದ ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಮಾತನಾಡಿ, ಕ್ರೀಡೆ ಜೀವನದ ಅವಿಭಾಜ್ಯ ಅಂಗ. ಇದರಿಂದ ಮಕ್ಕಳ ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ ಸಾಧ್ಯವಾಗಲಿದೆ. ಸೋಲು-ಗೆಲವು ಮುಖ್ಯವಲ್ಲ ಎಂದರು.
ಈ ಸಂದರ್ಭ ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಬೊಪ್ಪಂಡ ಡಾ. ಜಾಲಿ ಬೋಪಯ್ಯ, ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ ಮತ್ತಿತರರು ಮಾತನಾಡಿದರು.
ವೇದಿಕೆಯಲ್ಲಿ ಶ್ರೀ ರಾಮ ಟ್ರಸ್ಟ್ ವಿದ್ಯಾ ಸಂಸ್ಥೆಯ ಉಪಾಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ, ಎಲ್ಲಾ ನಿರ್ದೇಶಕರು, ಪ್ರಾಂಶುಪಾಲೆ ಬಿ.ಎಂ. ಶಾರದ, ಟಿ.ಪಿ.ಓ. ಶ್ರೀನಿವಾಸ್, ತಾಲೂಕು ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿಯರ ನಾಡ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು.
ಕ್ರೀಡಾಕೂಟದಲ್ಲಿ ಮಡಿಕೇರಿ ತಾಲೂಕಿನ ನಾಲ್ಕು ಹೋಬಳಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಮತ್ತು ದೈಹಿಕ ಶಿಕ್ಷಕರು ಪಾಲ್ಗೊಂಡಿದ್ದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಆಕರ್ಷಕ ಬ್ಯಾಂಡ್ ಮತ್ತು ಪಥಸಂಚಲನ ನಡೆಯಿತು.