ಕೂಡಿಗೆ, ಸೆ. 14: ಶಿರಂಗಾಲ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾ. 15 ರಂದು (ಇಂದು) 2018-19ನೇ ಸಾಲಿನ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ನಡೆಯಲಿದೆ.

ಶಿರಂಗಾಲ ಕಾಲೇಜಿನ ಪ್ರಾಂಶುಪಾಲ ಹೆಚ್.ಜೆ. ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕ್ರೀಡಾಕೂಟದ ಸಭಾ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿಯ ಅಧ್ಯಕ್ಷ ಹೆಚ್.ಆರ್. ಶ್ರೀನಿವಾಸ್ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ. ಕೆಂಚಪ್ಪ ಅವರ ಗೌರವ ಉಪಸ್ಥಿತಿಯಲ್ಲಿ ಮುಖ್ಯ ಅತಿಥಿಗಳಾಗಿ ತಾ.ಪಂ. ಸದಸ್ಯ ಎನ್.ಎಸ್. ಜಯಣ್ಣ, ಶಿರಂಗಾಲ ಗ್ರಾ.ಪಂ. ಅಧ್ಯಕ್ಷ ರಮೇಶ್, ಶಿರಂಗಾಲ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎನ್.ಬಿ. ಮಹೇಶ್, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಸೋಮಯ್ಯ, ಶಾಲಾಭಿವೃದ್ಧಿ ಸಮಿತಿಯ ಸದಸ್ಯ ಎಸ್.ಪಿ. ಶ್ರೀಧರ್, ದೇವರಾ ಸಮಿತಿಯ ಅಧ್ಯಕ್ಷ ಎಸ್.ಎಸ್. ಚಂದ್ರಶೇಖರ್, ಕಾರ್ಯದರ್ಶಿ ಸಿ.ಎನ್. ಲೋಕೇಶ್ ಆಗಮಿಸಲಿದ್ದಾರೆ.

ಅಂದು ಖೋ-ಖೋ ಮತ್ತು ಥ್ರೋಬಾಲ್ ಪಂದ್ಯಾವಳಿಗಳು ನಡೆಯಲಿದ್ದು, ಸೋಮವಾರಪೇಟೆ ತಾಲೂಕಿನ ಪದವಿಪೂರ್ವ ಕಾಲೇಜಿನ ಖೋ-ಖೋ ಮತ್ತು ಥ್ರೋಬಾಲ್ ತಂಡಗಳು ಹೆಸರನ್ನು ನೊಂದಾಯಿಸಿಕೊಳ್ಳುವಂತೆ ತಿಳಿಸಲಾಗಿದೆ. ಮಾಹಿತಿಗೆ ದೂರವಾಣಿ ಸಂಖ್ಯೆ 9448382017, 7892427665 ಸಂಪರ್ಕಿಸಲು ಕೋರಿದೆ.