ಮಡಿಕೇರಿ, ಸೆ. 12: ಐಬಿಪಿಎಸ್‍ರವರು ಸಾರ್ವಜನಿಕ ವಲಯದ ಬ್ಯಾಂಕ್‍ಗಳಲ್ಲಿ ಖಾಲಿಯಿರುವ ಪ್ರೊಬೇಷನರಿ ಅಧಿಕಾರಿ/ ಮ್ಯಾನೇಜ್‍ಮೆಂಟ್ ಟ್ರೈನಿ (ಪಿಒ/ಎಂಟಿ) ಹುದ್ದೆಗಳಿಗೆ ಅಕ್ಟೋಬರ್-2018 ರಲ್ಲಿ ನಡೆಸಲು ಉದ್ದೇಶಿಸಿರುವ ಸಾಮಾನ್ಯ ಲಿಖಿತ ಪರೀಕ್ಷೆಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಇವರ ವತಿಯಿಂದ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ತಾ. 20 ರಿಂದ 29 ರವರೆಗೆ ಮಡಿಕೇರಿಯಲ್ಲಿ ಆಯೋಜಿಸಲಾಗಿದೆ. ಪರೀಕ್ಷಾ ಪೂರ್ವ ತರಬೇತಿಯಲ್ಲಿ ಸದರಿ ಹುದ್ದೆಗಳಿಗೆ ಐಬಿಪಿಎಸ್ ಇವರು ನಿಗದಿಪಡಿಸಿರುವ ಪಠ್ಯಕ್ರಮಕ್ಕೆ ಅನುಗುಣವಾಗಿ ಗುಣಮಟ್ಟದ ತರಬೇತಿಯನ್ನು ನೀಡಲಾಗುವದು. ಪರೀಕ್ಷಾ ಪೂರ್ವ ತರಬೇತಿ ಪಡೆಯಲಿಚ್ಛಿಸುವ, ಅಭ್ಯರ್ಥಿಗಳು ತಮ್ಮ ಹೆಸರನ್ನು ಖುದ್ದಾಗಿ ಅಥವಾ ಅಂಚೆ ಕಾರ್ಡಿನ ಮುಖಾಂತರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಇಲ್ಲಿ ನೋಂದಾಯಿಸಲು ಸೂಚಿಸಲಾಗಿದೆ.