ಮಡಿಕೇರಿ, ಸೆ. 14: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2018-19 ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ (1 ರಿಂದ 10 ನೇ ತರಗತಿ) ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಂದ “ರಾಜ್ಯ ವಿದ್ಯಾರ್ಥಿ ವೇತನ”ಕ್ಕೆ ಅರ್ಜಿ ಅಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಸಂಬಂಧಪಟ್ಟ ಶಾಲೆ/ ಸಂಸ್ಥೆಯ ಮುಖ್ಯೋಪಾಧ್ಯಾಯರ ಮೂಲಕ ಅರ್ಜಿಯನ್ನು ಸಲ್ಲಿಸುವದು. ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ (ಎನ್.ಎಸ್.ಪಿ 2.0) ನಲ್ಲಿ ಅರ್ಜಿ ಸಲ್ಲಿಸಿದ ನಂತರ ಎನ್ಎಸ್ಪಿ ಐಡಿ ಮತ್ತು ಶಿಕ್ಷಣ ಇಲಾಖೆಯಿಂದ ಪಡೆದ ಎಸ್ಎಟಿಎಸ್ ಐಡಿಯೊಂದಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (hಣಣಠಿ;//ssಠಿ.ಞಚಿಡಿಟಿಚಿಣಚಿಞಚಿ.gov.iಟಿ) ಅರ್ಜಿ ಸಲ್ಲಿಸುವದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲಾತಿಗಳು: ವಿದ್ಯಾರ್ಥಿಯ ಮತ್ತು ಪೋಷಕರ ಆಧಾರ್ ಸಂಖ್ಯೆ (ಆಧಾರ್ ಇಲ್ಲದಿದ್ದಲ್ಲಿ ಇ.ಐ.ಡಿ. ಸಂಖ್ಯೆ), ಆದಾಯ ಮತ್ತು ಜಾತಿ ಪ್ರಮಾಣ ಪತ್ರದ ಆರ್.ಡಿ. ಸಂಖ್ಯೆ, ವಿದ್ಯಾರ್ಥಿಯ ಬ್ಯಾಂಕ್ ಹೆಸರು, ಖಾತೆ ಸಂಖ್ಯೆ, ಐಎಫ್ಸಿ ಸಂಖ್ಯೆ ಮತ್ತು ಶಾಖೆ, ಆಧಾರ್ನಲ್ಲಿ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಇಲ್ಲದಿದ್ದಲ್ಲಿ ಅನುಮತಿ ಪತ್ರ.
ವಿದ್ಯಾರ್ಥಿಗಳು 2018-19ನೇ ಸಾಲಿಗೆ ರಾಜ್ಯ ಮತ್ತು ರಾಷ್ಟ್ರಮಟ್ಟದ ತಂತ್ರಾಂಶ ಎರಡಲ್ಲೂ ಅರ್ಜಿ ಸಲ್ಲಿಸುವದು ಕಡ್ಡಾಯವಾಗಿದೆ. ಅಗತ್ಯ ಮಾಹಿತಿಗೆ ಇಲಾಖಾ ವೆಬ್ಸೈಟ್ ತಿತಿತಿ.goಞಜom.ಞಚಿಡಿ.ಟಿiಛಿ.iಟಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, “ಮಾಹಿತಿ ಕೇಂದ್ರ” ಮೌಲಾನಾ ಅಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ ದೂರವಾಣಿ ಸಂಖ್ಯೆ: 08272-220214 ನ್ನು ಸಂಪರ್ಕಿಸಬಹುದು.