ಮಡಿಕೇರಿ, ಸೆ. 14: ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿಯಲ್ಲಿ ಖಾಲಿ ಇರುವ 3 ಹುದ್ದೆಗಳಾದ ರಕ್ಷಣಾಧಿಕಾರಿ (ಅಸಾಂಸ್ಥಿಕ), ಲೀಗಲ್ ಕಂ ಪ್ರೊಬೇಷನ್ ಮತ್ತು ಆಪ್ತ ಸಮಾಲೋಚಕರು ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಸ್ವ ವಿವರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರಗಳ ನಕಲು ಗಳೊಂದಿಗೆ ಅರ್ಜಿಗಳನ್ನು ಸೆಪ್ಟೆಂಬರ್ 18 ರೊಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಲ್ಯಾಣ ಮಂಟಪದ ಮುಂಭಾಗ, ಓಂಕಾರೇಶ್ವರ ದೇವಸ್ಥಾನ ರಸ್ತೆ ಮಡಿಕೇರಿ ಈ ವಿಳಾಸಕ್ಕೆ ಸಲ್ಲಿಸು ವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ 08272-228800 ಸಂಪರ್ಕಿಸಬಹುದಾಗಿದೆ.