ಮಡಿಕೇರಿ, ಸೆ.15 : ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಧನ ಸಹಾಯ ಸ್ವರೂಪ ಹಾಗೂ ಸಮೂಹ ಬ್ಯಾಂಕ್ ಸಾಲ ಯೋಜನೆಯಡಿ ಸಾಲ ಸಹಾಯಧನ ಪಡೆದು ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಪಲಾನುಭವಿಗಳ ಸಾಲ, ಬಡ್ಡಿ ಮತ್ತು ದಂಡ ಬಡ್ಡಿಯನ್ನು ಮನ್ನಾ ಮಾಡಲು ಸಮೀಕ್ಷೆ ಮಾಡಲಾಗುವದು.

ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಜಿಲ್ಲಾ ಕಚೇರಿಯಿಂದ ಧನ ಸಹಾಯ ಪಡೆದಿರುವ ಫಲಾನುಭವಿಗಳು ತಾ. 25 ರೊಳಗೆ ತಮ್ಮ ಬಿ.ಪಿ.ಎಲ್. ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಸಂಬಂಧಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಒಂದು ವೇಳೆ ಸಾಲ ಪಡೆದ ಫಲಾನುಭವಿಯು ದೈವಾಧೀನರಾದ ಸಂದರ್ಭದಲ್ಲಿ ಸಂಬಂಧಿಸಿದ ವಾರಸುದಾರರು ಫಲಾನುಭವಿಯ ಮರಣ ಪ್ರಮಾಣ ಪತ್ರ ಹಾಗೂ ವಾರಸುದಾರರ ಬಿಪಿಎಲ್ ಕಾರ್ಡ್‍ನ ದೃಢೀಕೃತ ಪ್ರತಿಯನ್ನು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳ ಕಚೇರಿ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಈ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ 08272-225946 ಇಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಎಂ.ಎ.ಶಾಂತಿ ಅವರು ತಿಳಿಸಿದ್ದಾರೆ.