ಶನಿವಾರಸಂತೆ, ಸೆ. 20: ಬೆಂಗಳೂರಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ಮುಳ್ಳೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಿ.ಎಸ್. ಸತೀಶ್ ಅವರನ್ನು ಸನ್ಮಾನಿಸಲಾಯಿತು.

ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಂಡ್ಲಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಡಿ.ಎಸ್. ಮಧುಕುಮಾರ್ ಶಿಕ್ಷಕ ಸತೀಶ್ ಹಾಗೂ ಮುಖ್ಯ ಶಿಕ್ಷಕ ಮಂಜುನಾಥ್ ಅವರನ್ನು ಸನ್ಮಾನಿಸಿ, ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಅಡುಗೆ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.